Advertisement

ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ : ಹೋರಾಟಗಾರರ ಬಂಧಿಸಿದ ಪೊಲೀಸರು

01:50 PM Sep 10, 2022 | Team Udayavani |

ದೊಡ್ಡಬಳ್ಳಾಪುರ : ಜನಸ್ಪಂದನದ ವೇಳೆ ಕರಾಳೋತ್ಸವದ ಆಚರಿಸಲು ಹೊರಟಿದ್ದ ಜಿಲ್ಲಾ ಕೇಂದ್ರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ದೊಡ್ಡಬಳ್ಳಾಪುರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ, ಇಂದು ನಡೆಯಲಿರುವ ಸರ್ಕಾರದ ಜನಸ್ಪಂದನ ಕಾರ್ಯಕ್ರಮವನ್ನು ಕರಾಳೋತ್ಸವವನ್ನಾಗಿ ಆಚರಿಸಲು ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನಿರ್ಧರಿಸಲಾಗಿತ್ತು.

Advertisement

ಇದರ ಅಂಗವಾಗಿ ಇಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕನ್ನಡ ಜಾಗೃತ ಪರಿಷತ್ತಿನ ಮುಂಭಾಗದಿಂದ ಬೃಹತ್ ಜಾಥಾ ಹೊರಟು ನಗರದ ಅರ್ಕಾವತಿ ವೃತ್ತದಲ್ಲಿ ಕರಾಳೋತ್ಸವ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲು ಸಮಿತಿಯ ಮುಖಂಡರು ನಿರ್ಧಾರಿಸಿದ್ದರು. ಆದರೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಮುಂದಾದರು ಒಪ್ಪದ ಕಾರಣ, ನೂರಾರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದು, ಬಸ್ಸಿನಲ್ಲಿ ಕರೆದೊಯ್ದುರು.

ಈ ವೇಳೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವರ್ತನೆ ಖಂಡಿಸಿ ಪ್ರತಿಭಟನಾ ನಿರತರು ಧಿಕ್ಕಾರ ಕೂಗಿದರು.

ಇದನ್ನೂ ಓದಿ : ಬಿಜೆಪಿಯವರು ಬೇಕಾದರೆ ರಾಹುಲ್ ಗಾಂಧಿಯ ಚಡ್ಡಿಯ ಬಗ್ಗೆಯೂ ಮಾತಾಡಲಿ: ಡಿಕೆಶಿ ತಿರುಗೇಟು

ಜಿಲ್ಲಾ ಕೇಂದ್ರ ಹೋರಾಟ ಸಮಿತಿಯ ವತಿಯಿಂದ ದೊಡ್ಡಬಳ್ಳಾಪುರ ವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸಂಬಂಧಪಟ್ಟ ಕಡತಗಳನ್ನು ಪರಿಶೀಲಿಸಿ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅವರು ಪದೇ ಪದೇ ಜಿಲ್ಲಾ ಕೇಂದ್ರದ ವಿಚಾರವಾಗಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಲೇ ಇರುತ್ತಾರೆ. ಈ ದಿಸೆಯಲ್ಲಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಜನಸ್ಪಂದನದ ವೇಳೆ ಕರಾಳೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಾಕೆ.ಸುಧಾಕರ್ ಅವರ ಹೇಳಿಕೆ ಖಂಡಿಸಿ ತಾಲೂಕಿನಲ್ಲಿ ಹೋರಾಟ ನಡೆಸಲಾಗುತ್ತಿದೆ. ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆಗಳಿದ್ದರು ದೊಡ್ಡಬಳ್ಳಾಪುರ ತಾಲೂಕಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ದಿಸೆಯಲ್ಲಿ ಜಿಲ್ಲಾ ಕೇಂದ್ರದ ಅರ್ಹತೆಗಳ ಬಗ್ಗೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿಯ ಅರ್ಹತೆಗಳನ್ನು ಪಟ್ಟಿ ಮಾಡಿ, ಹಾಗೂ ದೊಡ್ಡಬಳ್ಳಾಪುರದ ವಿಶೇಷತೆಗಳ ಬಗ್ಗೆ ಕರಪತ್ರದಲ್ಲಿ ಮಾಹಿತಿ ನೀಡಿ ಸಾರ್ವಜನಿಕರಿಗೆ ಹಂಚಿದ್ದು, ಸಾರ್ವಜನಿಕರು ಸಹ ಹೋರಾಟವನ್ನು ಬೆಂಬಲಿಸಲು ಹೋರಾಟ ಸಮಿತಿ ಮನವಿ ಮಾಡಿದೆ ಎಂದು ಪ್ರತಿಭಟನಾಕಾರರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next