Advertisement
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ರಥಕ್ಕೆ ಹಣ್ಣು, ದವನ ಅರ್ಪಿಸಿ, ದೇವರ ದರ್ಶನ ಪಡೆದು ಧನ್ಯತೆ ಮೆರೆದರು. ಬೆಳಗ್ಗೆ 3 ಗಂಟೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
Related Articles
Advertisement
ಬ್ರಹ್ಮರಥೋತ್ಸವ ಹಾಗೂ ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.