Advertisement
”ಧಮ್ಮಿದ್ದರೆ ಬಿಜೆಪಿ ಯಾತ್ರೆ ನಿಲ್ಲಿಸಿ” ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿನ ಸಿಎಂ ಭಾಷಣ ಉಲ್ಲೇಖಿಸಿ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿ ಟ್ವೀಟ್ ಮಾಡಿದ್ದಾರೆ.
Related Articles
Advertisement
”ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕಾಲೆಳೆದಿದ್ದಾರೆ.
”ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಟ್ವೀಟ್ ಮಾಡಿದ್ದಾರೆ.
”ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ “ಜಾತ್ರೆ”ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಟೀಕಿಸಿದ್ದಾರೆ.
”‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ” ಎಂದು ವ್ಯಂಗ್ಯವಾಡಿದ್ದಾರೆ.