Advertisement

ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ತೊರೆಯಲ್ಲ’

01:22 AM Jan 25, 2019 | |

ಅಥಣಿ: ‘ಕಳೆದ 25 ವರ್ಷಗಳಿಂದ ನಾನು ನಿಷ್ಠಾವಂತ ಕಾಂಗ್ರೆಸ್‌ ಕಾರ್ಯಕರ್ತ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೊರೆಯುವುದಿಲ್ಲ ಹಾಗೂ ಗೋಕಾಕ ಶಾಸಕ ಮತ್ತು ಮಾಜಿ ಸಚಿವರಾದ ರಮೇಶ ಜಾರಕಿಹೊಳಿ ಅವರಿಗೆ ನಿಷ್ಠಾವಂತನಾಗಿರುತ್ತೇನೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಗುರುವಾರ ಅಥಣಿ ಕ್ಷೇತ್ರಕ್ಕೆ ಆಗಮಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

Advertisement

‘ನಾನು ಕಾಂಗ್ರೆಸ್‌ ಪಕ್ಷದಲ್ಲಿಯೇ ಇರುತ್ತೇನೆ. ಕಾಂಗ್ರೆಸ್‌ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧ. ಕಳೆದ 15 ವರ್ಷಗಳಿಂದ ಅಥಣಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಸ್ಥಿತ್ವ ಇರದ ಸಮಯದಲ್ಲಿ ರಮೇಶ ಜಾರಕಿಹೊಳಿ ಮತ್ತು ಕ್ಷೇತ್ರದ ಜನತೆಯ ಸಹಕಾರದಿಂದ ನಾನು ಶಾಸಕನಾಗಿರುವೆ. ಇತ್ತೀಚೆಗೆ ರಾಜಕೀಯ ಬೆಳವಣಿಗೆ ಮತ್ತು ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ. ಯಾವುದೇ ಕಾರಣಕ್ಕೂ ನಾನು ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಪಕ್ಷ ಬಿಡುವುದಿಲ್ಲ. ಪಕ್ಷಕ್ಕೆ ನಿಷ್ಠಾವಂತರಾಗಿದ್ದೇವೆ’ ಎಂದರು

Advertisement

Udayavani is now on Telegram. Click here to join our channel and stay updated with the latest news.

Next