ನಿರ್ದೇಶಕ ಪವನ್ ಒಡೆಯರ್ ತಮ್ಮ “ಒಡೆಯರ್ ಮೂವೀಸ್’ ಮೂಲಕ “ಡೊಳ್ಳು’ ಸಿನಿಮಾ ನಿರ್ಮಿಸಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರ ಚಿತ್ರೋತ್ಸವಗಳಲ್ಲಿ ಆಯ್ಕೆಯಾಗುತ್ತಾ ಪ್ರಶಸ್ತಿಗಳನ್ನು ತನ್ನದಾಗಿಸಿಕೊಳ್ಳುತ್ತದೆ.
ಈಗಾಗಲೇ 20ನೇ ಡಾಕಾ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್’ಗೆ ಅಧಿಕೃತವಾಗಿ ಆಯ್ಕೆಯಾಗಿದ್ದ ಚಿತ್ರ, ಆ ನಂತರ ಇನ್ನೋವೇಟಿವ್ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್‌ನಲ್ಲಿ “ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈಗ ಈ ಚಿತ್ರ ಗೋವಾದಲ್ಲಿ ನಡೆಯುವ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ಕನ್ನಡ ಚಿತ್ರರಂಗದಿಂದ ಅಧಿಕೃತವಾಗಿ ಆಯ್ಕೆಯಾಗಿದೆ. ಈ ಮೂಲಕ “ಡೊಳ್ಳು’ ಸದ್ದು ಜೋರಾಗಿದೆ.
ಇದನ್ನೂ ಓದಿ:ಮತ್ತೆ ಖಾಕಿ ತೊಟ್ಟ ಆಯೇಷಾ
“ಡೊಳ್ಳು’ ಚಿತ್ರವನ್ನು ಈ ಹಿಂದೆ “ಮಹಾನ್ ಹುತಾತ್ಮ’ ಕಿರುಚಿತ್ರ ನಿರ್ದೇಶಿಸಿದ ಅನುಭವವಿದ್ದ ಸಾಗರ್ ಪುರಾಣಿಕ್ ನಿರ್ದೇಶಿಸಿದ್ದಾರೆ. ಇನ್ನು ಹೆಸರೇ ಹೇಳುವಂತೆ “ಡೊಳ್ಳು’ ಜಾನಪದ ನೃತ್ಯವಾದ ಡೊಳ್ಳು ಕುಣಿತದ ಬಗೆಗಿನ ಸಿನಿಮಾವಾಗಿದೆ.
ಕಿರುತೆರೆ ನಟ ಕಾರ್ತಿಕ್ ಮಹೇಶ್, ಈ ಚಿತ್ರದಲ್ಲಿ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಶ್ರೀನಿಧಿ ಡಿ. ಎಸ್ ಚಿತ್ರಕಥೆ ಬರೆದಿದ್ದು, ಚಿತ್ರದ ಹಾಡುಗಳಿಗೆ ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ.