ನವದೆಹಲಿ:ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಗುರುವಾರ (ಮೇ 19) 3.50 ರೂಪಾಯಿ ಹೆಚ್ಚಳವಾಗಿದ್ದು, ಇದರೊಂದಿಗೆ ಎಲ್ ಪಿಜಿ ಅಡುಗೆ ಅನಿಲ ಸಿಲಿಂಡರ್ ದರ ಒಂದು ಸಾವಿರ ರೂಪಾಯಿ ಗಡಿ ದಾಟಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ
ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಈಗ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 1,003 (14.2 ಕೆಜಿ) ರೂಪಾಯಿಗೆ ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿ ಪ್ರಕಟಣೆಯಲ್ಲಿ ವಿವರಿಸಿದೆ.
ಬೆಂಗಳೂರಿನಲ್ಲಿ ಗುರುವಾರ 14.2ಕೆಜಿ ತೂಕದ ಸಿಲಿಂಡರ್ ಬೆಲೆ 1,002.50 ರೂಪಾಯಿಗೆ ಏರಿಕೆಯಾಗಿದೆ. ಮೇ 7ರಂದು ಅಡುಗೆ ಅನಿಲ ಪ್ರತಿ ಸಿಲಿಂಡರ್ ದರವನ್ನು 50 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.
ಮೇ 1ರಂದು ವಾಣಿಜ್ಯ ಬಳಕೆಯ 19ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 102.50 ರೂಪಾಯಿ ಹೆಚ್ಚಳವಾಗಿದ್ದು, ಇದರೊಂದಿಗೆ ವಾಣಿಜ್ಯ ಬಳಕೆ ಸಿಲಿಂಡರ್ ದರ 2,355.50 ರೂಪಾಯಿಗೆ ಏರಿಕೆಯಾಗಿತ್ತು.
ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಈಗ 2,355.50 ರೂಪಾಯಿ. ವಾಣಿಜ್ಯ ನಗರಿ ಮುಂಬಯಿಯಲ್ಲಿ 2,307 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.