Advertisement

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

08:19 AM Sep 18, 2024 | Team Udayavani |

ಮಿಚಿಗನ್‌: ಅಮೆರಿಕದ ಮಾಜಿ ಅಧ್ಯಕ್ಷ (United State Of America) ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump)ಮುಂದಿನ ವಾರ ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರನ್ನು ಭೇಟಿ ಮಾಡುವುದಾಗಿ ಮಂಗಳವಾರ(ಸೆ17) ಹೇಳಿದ್ದಾರೆ.

Advertisement

ಮಿಚಿಗನ್‌ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಿರುವ ಕುರಿತು ಟ್ರಂಪ್ ಘೋಷಿಸಿದರು. ಭಾರತದೊಂದಿಗೆ ಯುಎಸ್ ವ್ಯಾಪಾರದ ಬಗ್ಗೆ ಮಾತನಾಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಆದರೆ, ಉಭಯ ನಾಯಕರು ಎಲ್ಲಿ ಭೇಟಿಯಾಗಲಿದ್ದಾರೆ ಎಂಬ ಬಗ್ಗೆ ಅವರು ಯಾವುದೇ ವಿವರಗಳನ್ನು ನೀಡಿಲ್ಲ.

ಕ್ವಾಡ್‌ ನಾಯಕರ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೆ.21 ರಿಂದ 23 ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.