ಶಿರ್ವ: ಹೆತ್ತವರಿಗೆ ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಕಲಿಯದಿದ್ದರೆ ಮುಂದಿನ ವಿದ್ಯಾಭ್ಯಾಸಕ್ಕೆ ತೊಡಕು ಬರುತ್ತದೆ ಎಂಬ ಭಾವನೆ ಇದೆ. ಆದರೆ ಆಂಗ್ಲ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗಿಂತ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಎತ್ತರದ ಗುಣವಿದೆ. ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿ ಶತಮಾನ ಕಂಡಿರುವ ಹಿಂದೂ ಹಿ. ಪ್ರಾ.ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ
ದಾನಿಗಳ,ಹಳೆವಿದ್ಯಾರ್ಥಿಗಳ,ಹೆತ್ತವರ ಕೊಡುಗೆ ಸ್ಮರಣೀಯವಾಗಿದೆ ಎಂದು ನಿಟ್ಟೆ ವಿ.ವಿ.ಯ ಕುಲಾಧಿಪತಿ, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು.
ಅವರು ಶತಮಾನೋತ್ಸವ ಸಂಭ್ರಮ ಆಚರಣೆಯ ಪ್ರಯುಕ್ತ ಹಿಂದೂ. ಹಿ. ಪ್ರಾ.ಶಾಲೆಯ ನವೀಕರಣಗೊಂಡ ಹೇಮಲತಾ ಶಂಭು ಶೆಟ್ಟಿ ವೇದಿಕೆಯನ್ನು ಉದ್ಘಾಟಿಸಿ ಬಳಿಕ ನಡೆದ ಶತಮಾನೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ,ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಮಾತನಾಡಿ ಸಂವಿಧಾನದಲ್ಲಿ ವಿದ್ಯೆ ಮತ್ತು ಆರೋಗ್ಯವನ್ನು ಜನರಿಗೆ ಒದಗಿವುದು ಸರಕಾರದ ಜವಾಬ್ದಾರಿ ಎಂದು ಒಪ್ಪಿಕೊಂಡಿದೆಯಾದರೂ ದೇಶದಲ್ಲಿ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾದಾನ ನೀಡುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಆಡಳಿತ ಮಂಡಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯೂ ಇದೆ ಎಂದು ಹೇಳಿದರು.
ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕರು ಪ್ರಸಕ್ತ ಶಿಕ್ಷಕರನ್ನು ಹಾಗೂ ಧನಸಹಾಯ ಮಾಡಿದ ದಾನಿಗಳನ್ನು ಗೌರವಿಸಲಾಯಿತು.
ಅತಿಥಿಗಳಾದ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ,ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ,ಮುಂಬೈ ಎಸ್.ಎಂ. ಶಿಕ್ಷಣ ಸಂಸ್ಥೆಗಳ ಚೇರ್ಮನ್ ಸಿಎ ಶಂಕರ ಶೆಟ್ಟಿ,ಕಾಪು ದಂಡ ತೀರ್ಥ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ|ಕೆ. ಪ್ರಭಾಕರ ಶೆಟ್ಟಿ,ಮುಂಬೈ ಉದ್ಯಮಿ ಕುತ್ಯಾರು ರವೀಂದ್ರ ಅರಸ್, ಎಂಎಸ್‌ಆರ್‌ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘ ಮುಂಬೈ ಘಟಕದ ಅಧ್ಯಕ್ಷ ಉದಯ ಸುಂದರ್ ಶೆಟ್ಟಿ,ಆಡಳಿತಾಧಿಕಾರಿ ಪ್ರೊ|ವೈ. ಭಾಸ್ಕರ ಶೆಟ್ಟಿ ಮಾತನಾಡಿದರು. ಎಂಎಸ್‌ಆರ್‌ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘ ಶಿರ್ವ ಘಟಕದ ಅಧ್ಯಕ್ಷ ಉಮೇಶ್ ಶೆಟ್ಟಿ ಕಳತ್ತೂರು, ಉದ್ಯಮಿ ಸೈಮನ್ ಡಿ‡ ಸೋಜಾ,ದಾನಿ ಅಟ್ಟಿಂಜೆ ಶಂಭು ಶೆಟ್ಟಿ, ಸಮಿತಿಯ ಕೋಶಾಧಿಕಾರಿ ಜಗದೀಶ ಅರಸ್, ಶಾಲಾ ಮುಖ್ಯ ಶಿಕ್ಷಕ ವಾಸು ಆಚಾರ್ ಉಪಸ್ಥಿತರಿದ್ದರು.
ಶತಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ಪ್ರಸ್ತಾವನೆಗೈದರು. ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆಸ್ವಾಗತಿಸಿದರು. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿ. ಸುಬ್ಬಯ್ಯ ಹೆಗ್ಡೆ ವರದಿ ವಾಚಿಸಿದರು. ಪ್ರಶಾಂತ್ ಬಿ. ಶೆಟ್ಟಿ ಮತ್ತು ಲಕೀÒ$¾ದೇವಿ ಶೆಟ್ಟಿ ನಿರೂಪಿಸಿ, ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಶ್ರೀಪತಿ ಕಾಮತ್ ವಂದಿಸಿದರು.