Advertisement

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಸಿಎಂ ಪರಿಹಾರ ನಿಧಿಗೆ 1 ಕೋ ರೂ ದೇಣಿಗೆ ಸಲ್ಲಿಕೆ

10:19 AM Oct 12, 2019 | Sriram |

ಕಲಬುರಗಿ: ಇಲ್ಲಿನ ಶರಣಬಸವ ವಿಶ್ವವಿದ್ಯಾಲಯ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಂದ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋ ರೂ ಪರಿಹಾರ ಚೆಕ್ ನ್ನು ಸಲ್ಲಿಸಲಾಯಿತು.

Advertisement

ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರು ಹಾಗೂ ಶರಣಬಸವ ವಿಶ್ವವಿದ್ಯಾಲಯ ದ ಕುಲಾಧಿಪತಿಗಳಾದ ಡಾ. ಶರಣಬಸವಪ್ಪ ಅಪ್ಪ ಅವರು ಕಳೆಸ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಬಂದ ಸಂದರ್ಭದಲ್ಲಿ ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರ ದಲ್ಲಿ‌ನಡೆದ ಕಾರ್ಯಕ್ರಮ ದಲ್ಲಿ ಡಾ.ಅಪ್ಪಾಜಿ ಅವರು ಸಿಎಂ ಸಮ್ಮುಖದಲ್ಲಿ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 1 ಕೋ ರೂ ಪರಿಹಾರ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 1 ಕೋ ರೂ ಮೊತ್ತದ ಚೆಕ್ ನ್ನು ನೀಡಿದರು.

ಈ ಸಂದರ್ಭದಲ್ಲಿ ಶರಣಬಸವ ವಿವಿಯ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಶರಣಬಸವೇಶ್ವರರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸುರೇಶ ನಂದಗಾಂವ, ಜಿಲ್ಲೆಯ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.

ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಈ ಸಂದರ್ಭದಲ್ಲಿ ಮಾತನಾಡಿ, ಡಾ. ಶರಣಬಸವಪ್ಪ ಅಪ್ಪ ಅವರು ಘೋಷಣೆ ಮಾಡಿರುವಂತೆ ಪರಿಹಾರ ನಿಧಿ ಗೆ ಚೆಕ್ ಸಲ್ಲಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next