Advertisement

ದೇಣಿಗೆ ಸಂಗ್ರಹ ವಿಷಯದಲ್ಲಿ ಯಾರಿಗೂ ಬಲವಂತ ಮಾಡುತ್ತಿಲ್ಲ: ಸಿಎಂ ಬಿಎಸ್ ವೈ

01:04 PM Feb 17, 2021 | Team Udayavani |

ಶಿವಮೊಗ್ಗ: ರಾಜ್ಯ ಸರ್ಕಾರ ಕೈಗಾರಿಕಾ ಅಭಿವೃದ್ಧಿಗಾಗಿ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಿದೆ. ವಿಮಾನ ನಿಲ್ದಾಣ ಸ್ಥಾಪನೆ ಮೂಲಕ ಹೊಸ ಕೈಗಾರಿಕೆಗಳನ್ನು ಸೆಳೆಯುವ ಪ್ರಯತ್ನ ನಡೆದಿದೆ. ಜಿಲ್ಲೆಯ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಶಿವಮೊಗ್ಗ ಹೊರ ವಲಯದ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 350 ಆಸನದ ಕೈಗಾರಿಕಾ ಭವನ ನಿರ್ಮಾಣಕ್ಕೆ ಸರ್ಕಾರ 5 ಕೋಟಿ ಬಿಡುಗಡೆ ಮಾಡಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದವರು ರಾಮ ಮಂದಿರಕ್ಕೆ 70 ಲಕ್ಷ ರೂ. ನೆರವು ನೀಡಿದ್ದೀರಿ. ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನದೇ ಧರ್ಮಾತೀತವಾಗಿ ದೇಣಿಗೆ ನೀಡಿರುವುದು ಸಂತಸದ ವಿಷಯ ಎಂದರು.

ಇದನ್ನೂ ಓದಿ: ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಐಟಿ ದಾಳಿ-ದಾಖಲೆಗಳ ಪರಿಶೀಲನೆ

ದೇಣಿಗೆ ಸಂಗ್ರಹ ವಿಷಯದಲ್ಲಿ ಯಾರಿಗೂ ಬಲವಂತ ಮಾಡುತ್ತಿಲ್ಲ. ಸ್ವಯಂ ಪ್ರೇರಿತವಾಗಿ ನೀಡುತ್ತಿದ್ದಾರೆ. ಜನರಿಂದ ಬಲವಂತವಾಗಿ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷದವರ ಹೇಳಿಕೆ ಅರ್ಥವಿಲ್ಲದ್ದು. ಅಯೋಧ್ಯೆಯಲ್ಲಿ ರಾಮ ಮಂದಿರವಿತ್ತು ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅಯೋಧ್ಯೆ ಬಿಟ್ಟು ಬೇರೆ ಕಡೆ ಮಂದಿರ ನಿರ್ಮಾಣ ಮಾಡಿದರೆ ದೇಣಿಗೆ ನೀಡುತ್ತೇವೆ ಎಂಬ ಹೇಳಿಕೆ ಸುಪ್ರೀಂ ಕೋರ್ಟ್‌ ತೀರ್ಪನ್ನು ಪ್ರಶ್ನಿಸಿದಂತೆ.

ವಿರೋಧ ಪಕ್ಷದವರು ಸ್ವಲ್ಪ ಯೋಚಿಸಿ ಮಾತನಾಡಬೇಕು. ಸುಮ್ಮನಿದ್ದರೆ ತುಂಬಾ ಒಳ್ಳೆಯದು. ನೀವು ಮಾತನಾಡುತ್ತಿರುವುದು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಟೀಕೆ-ಟಿಪ್ಪಣಿ ಮಾಡದೇ ಸುಮ್ಮನೀರಿ, ಅದರಿಂದ ದೇಶ ಹಾಗೂ ರಾಜ್ಯಕ್ಕೆ ಒಳ್ಳೆಯದಾಗುತ್ತೇ ಎಂದ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಗೋಕಾಕ್ ಕಿಂಗ್ ಪಿನ್ ಅಂದರ್

Advertisement

Udayavani is now on Telegram. Click here to join our channel and stay updated with the latest news.

Next