Advertisement

ರಾಮಮಂದಿರ ನಿರ್ಮಾಣಕ್ಕೆ ದೇಶದಾದ್ಯಂತ ಜ.15 ರಿಂದ ಫೆ. 27ರವರೆಗೆ ದೇಣಿಗೆ ಸಂಗ್ರಹ ಅಭಿಯಾನ

04:19 PM Jan 03, 2021 | Team Udayavani |

ಹುಬ್ಬಳ್ಳಿ: ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಜ.15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ ನಡೆಯಲಿದೆ ಎಂದು ವಿಎಚ್ ಪಿ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದ್ದಾರೆ.

Advertisement

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ  ಟ್ರಸ್ಟ್‌ ಅಡಿಯಲ್ಲಿ, ಜ.15 ರಿಂದ ಫೆಬ್ರವರಿ 5ರವರೆಗೆ, ಸುಮಾರು 27,500 ಗ್ರಾಮಗಳು ಸೇರಿದಂತೆ 90 ಲಕ್ಷ ರಾಮ ಭಕ್ತರನ್ನು ಸಂಪರ್ಕಿಸಿ ದೇಣಿಗೆ ಸಂಗ್ರಹಿಸಲು ವಿಶ್ವ ಹಿಂದೂ ಪರಿಷದ್ ನಿರ್ಧರಿಸಿದೆ ಎಂದರು.

ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯಲ್ಲಿ  ದೇಣಿಗೆ ಸಂಗ್ರಹಕ್ಕಾಗಿ ಪ್ರಾಂತೀಯ ಕಚೇರಿಗಳನ್ನು ಮತ್ತು  ಜಿಲ್ಲಾ ಮಟ್ಟದಲ್ಲಿ ಕಚೇರಿಗಳನ್ನು ಆರಂಭಿಸಲಾಗಿದೆ. ಗ್ರಾಮಗಳಲ್ಲಿ ದೇಣಿಗೆ ಸಂಗ್ರಹಕ್ಕೆ ಐದು ಜನಕ್ಕೆ ಒಂದರಂತೆ ತಂಡ ರಚಿಸಲಾಗಿದೆ ಎಂದರು.

ಎಲ್ಲರೂ ದೇಣಿಗೆ ನೀಡಲು ಅನುಕೂಲವಾಗುವಂತೆ 10, 100, 1000 ರೂ.ಗಳ ಕೂಪನ್ ಮಾಡಲಾಗಿದೆ. 2000 ರೂ.ಗಳಿಗಿಂತ ಹೆಚ್ಚಿನ ಹಣ ನೀಡುವವರಿಗೆ ರಶೀದಿ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಕೋವಿಡ್ ತಡೆ ಆಂದೋಲನಕ್ಕೆ ಸಿದ್ಧತೆ

Advertisement

ಸಂಗ್ರವಾಗುವ ದೇಣಿಗೆಯನ್ನು  ನಿಗದಿತ ಮೂರು  ಬ್ಯಾಂಕ್ ಗಳಿಗೆ ಜಮಾ ಮಾಡಲಾಗುವುದು  ಎಂದ ಅವರು ಆನ್ ಲೈನ್ ಮೂಲಕವೂ ದೇಣಿಗೆ ನೀಡಬಹುದಾಗಿದೆ ಎಂದು ಹೇಳಿದರು.

2.7 ಎಕರೆ ಜಾಗದಲ್ಲಿ 54 ಸಾವಿರ ಚದರ ಅಡಿಯಲ್ಲಿ ಮಂದಿರ ನಿರ್ಮಾಣ ಆಗುತ್ತಿದೆ. 67 ಎಕರೆ ಜಾಗದಲ್ಲಿ ಸಭಾಭವನ, ಗ್ರಂಥಾಲಯ, ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ ,ಗುರುಕುಲ ಸೇರಿದಂತೆ ವಿವಿಧ ಸೌಲಭ್ಯಗಳು ಇರಲಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next