Advertisement
ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರಕ್ಕೆ ಸ್ಪಂದನ ನೀಡಲು ಒಂದು ದಿನದ ವೇತನವನ್ನು ಸಿಎಂ ಪರಿಹಾರ ನಿಧಿಗೆ ನೀಡಲು ರಾಜ್ಯದ ವಿವಿ ಮತ್ತು ಪದವಿ ಕಾಲೇಜಿನ ಉಪನ್ಯಾಸಕರು ನಿರ್ಧರಿಸಿದ್ದಾರೆ. ಅಂದಾಜು 10 ಕೋ. ರೂ. ಸಂಗ್ರಹ ವಾಗಲಿದ್ದು, ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ ಮೂಲಕ ಇದನ್ನು ಸರಕಾರಕ್ಕೆ ನೀಡಲಾಗುವುದು ಎಂದು ವಿವಿ ಮತ್ತು ಕಾಲೇಜು ಉಪನ್ಯಾಸಕರ ಒಕ್ಕೂಟದ ಅಧ್ಯಕ್ಷ ಡಾ|ಬಿ.ಜಿ.ಭಾಸ್ಕರ್ ತಿಳಿಸಿದ್ದಾರೆ.
ಬೆಂಗಳೂರು: ಕೋವಿಡ್ 19 ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ ಒಂದು ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಮಸ್ಯೆ ಎದುರಿಸಲು ಹಾಗೂ ಅಗತ್ಯ ಜನರಿಗೆ ನೆರವಾಗಲು ಕಾಂಗ್ರೆಸ್ ತೀರ್ಮಾನಿಸಿದೆ. ಇನ್ನು ಜಿಲ್ಲೆ ತಾಲೂಕು ಮಟ್ಟದ ನಾಯಕರು ಮತ್ತು ಕಾರ್ಯಕರ್ತರು ಸ್ವಯಂ ಇಚ್ಛೆಯಿಂದ ದೇಣಿಗೆ ನೀಡಬಹುದು. ಎಲ್ಲ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಮೂಲಕ ತಮ್ಮ ದೇಣಿಗೆಯನ್ನು ನೀಡಲಿರುವರು ಎಂದು ಹೇಳಿದರು.