ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ – ಕಡಗರವಳ್ಳಿ ನಡುವಿನ ದೋಣಿಗಲ್‌ನಲ್ಲಿ ರೈಲು ಮಾರ್ಗದಲ್ಲಿ ಸಂಭವಿಸಿರುವ ಭೂ ಕುಸಿತದ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಪ್ರಯಾಣಿಕ ರೈಲು ಸಂಚಾರದ ಬಗ್ಗೆ ಯಾವುದೇ ನಿರ್ಧಾರ ಅಂತಿಮವಾಗಿಲ್ಲ.
ರೈಲು ಮಾರ್ಗದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ರೈಲು ಮಾರ್ಗದ ಕೆಳ ಭಾಗದಿಂದ ಎರಡನೇ ಹಂತದಲ್ಲಿ ಹಂತಹಂತವಾಗಿ ಬಂಡೆ ಕಲ್ಲು ಜೋಡಣೆ ಕಾರ್ಯ ನಡೆಸಲಾಗುತ್ತಿದೆ.
ರೈಲು ಮಾರ್ಗದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಆದರೂ ಪ್ರಯಾಣಿಕ ರೈಲು ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಗುರುವಾರ ಒಂದು ಹಂತದ ನಿರ್ಧಾರ ಪ್ರಕಟವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಮಾರ್ಗದ ಸುರಕ್ಷೆ ಪರಿಶೀಲಿಸಿದ ಬಳಿಕವೇ ಪ್ರಯಾಣಿಕ ರೈಲು ಓಡಾಟ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
ಶಿರಾಡಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ
ತಾಲೂಕಿನ ದೋಣಿಗಲ್‌ನಿಂದ ಮಾರನಹಳ್ಳಿವರೆಗಿನ ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿ ಹಲವು ವೇಳೆ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಅದರಲ್ಲೂ ದೊಡ್ಡತಪುÉ ಸಮೀಪ ನಿರಂತರವಾಗಿ ಭೂ ಕುಸಿತ ಉಂಟಾಗಿದ್ದರಿಂದ ಶಿರಾಡಿ ಘಾಟಿಯಲ್ಲಿ ಹಲವು ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು. ಈಗ ದುರಸ್ತಿ ಕಾರ್ಯ ತಾತ್ಕಾಲಿಕವಾಗಿ ಮುಗಿದಿದ್ದು, ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.