ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿತು. ಈ ಕುರಿತು ತಹಶೀಲ್ದಾರ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿ, ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರಕಾರಕ್ಕೆ ಶೀಘ್ರ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ 15ರಿಂದ 18 ಲಕ್ಷ ಜನಸಂಖ್ಯೆ ಹೊಂದಿರುವ ಮಡಿವಾಳ ಸಮುದಾಯ ಹಿಂದುಳಿದ ಜನಾಂಗದಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಶೋಷಣೆಗೊಳಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಈ ಕುರಿತು ಕರ್ನಾಟಕ ರಾಜ್ಯದಲ್ಲಿ ಮಡಿವಾಳ ಸಂಘ ಸ್ಥಾಪಿಸಿ, ಈ ಹಿಂದೆ ಸರಕಾರಕ್ಕೆ ಒತ್ತಾಯಿಸಲಾಗಿದೆ. ಆದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ವಿಷಾಧನಿಯ. ಡಾ| ಅನ್ನಪೂರ್ಣಮ್ಮ ವರದಿ ಅನುಸಾರ ಇತರೆ ರಾಜ್ಯಗಳಲ್ಲಿ ಕೂಡಾ ಮಡಿವಾಳ ಸಮುದಾಯವನ್ನು ಶೀಘ್ರ ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದುಆಗ್ರಹಿಸಿದ್ದಾರೆ.