ಬೆಂಗಳೂರು: ದಲಿತರು ಮತ್ತು ಅತಿಸಣ್ಣ ಸಮುದಾಯದವರು ಕೂಡ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ಆದರೆ ಅವರನ್ನು ಡಿಸಿಎಂ ಮಾಡಲಾಯಿತು. ಡಿಸಿಎಂ ಹುದ್ದೆಯಿಂದಲೂ ಡಿಪ್ರಮೋಟ್ ಮಾಡಲಾಯಿತು. ದಲಿತರನ್ನು, ಅಲ್ಪಸಂಖ್ಯಾತರಿಗೆ ಉಪ ಮುಖ್ಯಮಂತ್ರಿ ಮಾಡಬಹುದಾಗಿತ್ತು. ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ:Loksabha; ಕಾಂಗ್ರೆಸ್ ನಿರ್ನಾಮ ಮಾಡಲು ಜೆಡಿಎಸ್- ಬಿಜೆಪಿ ಮೈತ್ರಿ: ಕೆ.ಎಸ್.ಈಶ್ವರಪ್ಪ
ನಾನು ಈ ಸರ್ಕಾರದಲ್ಲಿ ಸಚಿವನಾಗುತ್ತೇನೆ, ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ಇರಬೇಡಿ. ಆದರೆ ಸಮಾಜಿಕ ನ್ಯಾಯಕ್ಕಾಗಿ, ತುಳಿತಕ್ಕೊಳಗಾಗಿರುವ ಸಮುದಾಯದ ಪರ ಹೋರಾಟಕ್ಕೆ ನಿಲ್ಲುತ್ತೆನೆ. ನನಗೆ ಯಾವುದೇ ಅಧಿಕಾರದ ಆಸೆಯಿಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ರಾಹುಲ್ ಗಾಂಧಿ ಅವರೊಟ್ಟಿಗೆ ಕೆಲಸ ಮಾಡಿದ್ದೇನೆ ಎಂದರು.
ಆಹಂಕಾರ, ದುರಂಹಕಾರ ತೋರಿದರೆ ಜನರು ತಕ್ಕ ಪಾಠ ಕಲಿಸುತ್ತಾರೆ. ಅದು ಈ ಚುನಾವಣೆಯಲ್ಲಿ ಸಾಬೀತಾಗಿದೆ. ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು ಎಂದು ಹರಿಪ್ರಸಾದ್ ಹೇಳಿದರು.