Advertisement

ನನ್ನ ಜನ್ಮದಿನ ಆಚರಣೆ ಬೇಡ : ಡಿ.ಕೆ. ಶಿವಕುಮಾರ್ ಮನವಿ

05:57 PM May 13, 2021 | Team Udayavani |

ಬೆಂಗಳೂರು: ಕೋವಿಡ್ ಸೋಂಕಿನ ರೂಪಾಂತರಿ ಅಲೆ  ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ವರ್ಷ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

Advertisement

ಮಾಧ್ಯಮ ಹೇಳಿಕೆಯಲ್ಲಿ ಡಿಕೇಶಿ, ‘ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೋವಿಡ್ ನ ಸ್ಥಿತಿ ಚಿಂತಾಜನಕವಾಗಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ಹಿತವಲ್ಲ. ಹೀಗಾಗಿ ಈ ಬಾರಿ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ ಎಂದಿದ್ದಾರೆ.

ಇನ್ನು, ನಾನು ಆ ದಿನ ಊರಲ್ಲಿ ಇರುವುದಿಲ್ಲ. ಹೀಗಾಗಿ ಯಾರೂ ಕೂಡ ಶುಭಾಶಯ ಕೋರಲು ನಿವಾಸದ ಬಳಿ ಬರುವುದು ಬೇಡ. ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು ಎಂದು ಅವರು ಕೋರಿಕೊಂಡಿದ್ದಾರೆ.

ಪರಿಸ್ಥಿತಿಯ ಗಂಭೀರತೆ ಅರಿತು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯಾರು ಕೂಡ ಈ ವಿಚಾರದಲ್ಲಿ ತಪ್ಪು ಭಾವಿಸಬಾರದು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ನನ್ನ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ :  ಪಾಸಿಟಿವ್‌ ಬಂದ 1 ಗಂಟೆಯೊಳಗೆ ಹೋಂ ಐಸೊಲೇಷನ್‌ ಆದವರಿಗೆ ಮೆಡಿಕಲ್‌ ಕಿಟ್‌ : ಅಶ್ವತ್ಥನಾರಾಯಣ

Advertisement
Advertisement

Udayavani is now on Telegram. Click here to join our channel and stay updated with the latest news.

Next