Advertisement
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಪಕ್ಷದ ನೂತನ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿ, ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬಂದಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ತಲುಪಲು ಶ್ರಮಿಸುತ್ತೇವೆ ಎಂದರು.
Related Articles
Advertisement
ಬೇರೆ ಪಕ್ಷಗಳು ಅಂತಂತ್ರ ಆದಾಗ ಜೆಡಿಎಸ್ ಸ್ವತಂತ್ರವಾಗುತ್ತದೆ. ಅದು ಕುಮಾರಸ್ವಾಮಿ ಅವರ ಸದಾಶಯ ಆಗಿರಬಹುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದ್ದಾರೆ. ನಾವೆಂದೂ ಅತಂತ್ರರಾಗಿಲ್ಲ. ಅವರೇ ಅಂತಂತ್ರವಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ. ಅವರ ಶಾಸಕರು, ಸಚಿವರು ಸಿದ್ದರಾಮಯ್ಯ ಸಂಪರ್ಕದಲ್ಲಿ ಇದ್ದಾರೆ ಎಂದರೆ, ಅಂಥವರಿಗೆ ಬಿಜೆಪಿ ನಾಯಕರಲ್ಲೇ ಕಡಿವಾಣ ಹಾಕುವ ಸ್ಥಿತಿ ಇಲ್ಲ. ಆದರೆ ಗೊಂದಲ ಸೃಷ್ಟಿ ಮಾಡುವುದಕ್ಕೆ ನಾವು ಎಲ್ಲೂ ಅವಕಾಶ ಕೊಟ್ಟಿಲ್ಲ. ಅವರನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಲಿಕ್ಕೆ ಬಿಜೆಪಿಗೆ ಸಾಧ್ಯ ಆಗಿಲ್ಲ ಎಂದರು.
ಸಿಎಂ ಇಬ್ರಾಹಿಂ ಬಂದರೆ ಸ್ವಾಗತ
ಮಾಜಿ ಸಚಿವ ಸಿಎಂ ಇಬ್ರಾಹಿಂ ಪಕ್ಷಕ್ಕೆ ಬಂದರೆ ಸ್ವಾಗತ. ಇಬ್ರಾಹಿಂ ಅವರು ಹಿರಿಯರಿದ್ದಾರೆ. ನಮ್ಮ ಪಕ್ಷ ಹಾಗೂ ಮಾಜಿ ಪ್ರಧಾನಿಗಳಾದ ದೇವೇಗೌಡರ ಏಳು ಬೀಳುವಿನಲ್ಲಿಯೂ ಜತೆಯಾದವರು. ಮೇಲ್ಮನೆ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ ಬಂದಿತ್ತು. ಆ ಸ್ಥಾನ ಸಿಕ್ಕಿದರೆ ಉಪಯೋಗ ಮಾಡಿಕೊಳ್ಳಿ. ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದು ಅವರಿಗೆ ಹೇಳಿದ್ದೆ. ಇಬ್ರಾಹಿಂ ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ. ನಾವು ಕದ್ದುಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೇನೆ. ಪಕ್ಷಕ್ಕೆ ಬಂದರೆ ಸೂಕ್ತ ಸ್ಥಾನಮಾನ ಕೊಡುತ್ತೇವೆ ಎಂದರು.