Advertisement

Uppinangady: ಅಪಾಯಕಾರಿ ಸ್ಥಳಗಳಲ್ಲಿ ಮೋಜು-ಮಸ್ತಿ, ಸೆಲ್ಫಿ ಬೇಡ

04:08 PM Aug 02, 2024 | Team Udayavani |

ಉಪ್ಪಿನಂಗಡಿ: ಉಪ್ಪಿನಂಗಡಿ ಪರಿಸರದಲ್ಲಿ ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್‌ ಭೇಟಿ ನೀಡಿ ವೀಕ್ಷಣೆ ಮಾಡಿದರು.

Advertisement

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಮನೆ ಜಲಾವೃತಗೊಂಡವರನ್ನು ಸ್ಥಳಾಂತರಿಸಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ, ಗ್ರಾ.ಪಂ. ಹಾಗೂ ಪ್ರವಾಹ ರಕ್ಷಣೆಯಲ್ಲಿ ತೊಡಗುವ ಇಲಾಖೆಗಳು ಹೊಂದಾಣಿಯಿಂದ ಕೆಲಸ ಮಾಡುತ್ತಿರುವುದರಿಂದ ಯಾವುದೇಸಮಸ್ಯೆಯಾಗಿಲ್ಲ. ಅಪಾಯಗಳು ಸಂಭವಿಸದಂತೆ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಿದ್ದು, ಎಲ್ಲ ತಂಡಗಳು ಸನ್ನದ್ಧ ಸ್ಥಿತಿಯಲ್ಲಿವೆ. ವಿಕೋಪಗಳು ಸಂಭವಿಸಿದರೆ ನೆರವಾಗಲು ಎನ್‌ಡಿಆರ್‌ಎಫ್ ತಂಡವೂ ಇದೆ. ಪ್ರಾಕೃತಿಕ ವಿಕೋಪಗಳು ಯಾವಾಗ ಸಂಭವಿಸುತ್ತವೆ ಎಂದು ಹೇಳಲಾಗದು. ಯಾರೂ ಕೂಡಾ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು ಎಂದರು.

ನದಿ ಬದಿ, ಕಾಲು ಸೇತುವೆ ಸೇರಿದಂತೆ ಅಪಾಯದ ಸ್ಥಳಗಳಲ್ಲಿ ಮೋಜು- ಮಸ್ತಿ ಮಾಡುವವರಿಗೆ, ಸೆಲ್ಫಿ ತೆಗೆದು ಸಂಭ್ರಮ ಪಡುವವರಿಗಾಗಿ ಆ ಸ್ಥಳಗಳಲ್ಲಿ ಮುನ್ನೆಚ್ಚರಿಕೆಫ‌ಲಕಗಳನ್ನು ಹಾಕಲಾಗಿದೆ. ಇದು ಎಚ್ಚರಿಕೆ ಮಾತ್ರವಲ್ಲ. ಕಾನೂನಾತ್ಮಕ ಆದೇಶವಾಗಿದೆ. ಇದನ್ನು ಉಲ್ಲಂ ಸಿದವರ ಎಫ್ಐಆರ್‌ ದಾಖಲು ಮಾಡಲಾಗುತ್ತದೆ. 24 ಗಂಟೆ ಜಲಾವೃತಗೊಂಡ ಮನೆಗಳಿಗೆ ಎನ್‌ ಡಿಆರ್‌ಎಫ್ನಿಂದ 10 ಸಾವಿರ ರೂಪಾಯಿ ಪರಿಹಾರ ದೊರೆಯಲಿದೆ. ಸಂಪೂರ್ಣ ನಾಶವಾದ ಮನೆಗಳಿಗೆ 1.20 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರು.

ವಯನಾಡು ದುರಂತದಲ್ಲಿ ದ.ಕ. ಕನ್ನಡ ಜಿಲ್ಲೆಯವರು ಯಾರಾದರೂ ಸಿಕ್ಕಿ ಹಾಕಿಕೊಂಡಿರವ ಮಾಹಿತಿಯಿದ್ದರೆ ಜಿಲ್ಲಾಡಳಿತವನ್ನು ಸಂಪರ್ಕಿಸುವಂತೆ ಸೂಚಿಸಿದರು. ತಹಶೀಲ್ದಾರ್‌ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ಚಂದ್ರ ನಾಯ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್‌., ಪಿಡಿಒ ವಿಲ್ಫ್ರೆಡ್ ಲಾರೆನ್ಸ್‌ ರೋಡ್ರಿಗಸ್‌, ಕಾರ್ಯದರ್ಶಿ ಗೀತಾ ಶೇಖರ್‌, ಗೃಹ ರಕ್ಷಕದಳದ ಸಿಬಂದಿ, ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾೖಕ್‌, ಸದಸ್ಯ ಅರ್ತಿಲ ಕೃಷ್ಣ ರಾವ್‌, ಗ್ರಾ. ಪಂ. ಉಪಾಧ್ಯಾಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಪ್ರಮುಖರಾದ ಇಸ್ಮಾಯಿಲ್‌ ತಂಙಳ್‌‚ , ಕೆಂಪಿ ಮಹಮ್ಮದ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next