Advertisement
ಬುಧವಾರ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಹಂತದ ಸಂಶೋಧನೆಗಳ ನಂತರವಷ್ಟೇ ಕೋವಿಡ್ ಲಸಿಕೆ ಮಾರುಕಟ್ಟೆಗೆ ಬಿಡಲಾಗಿದೆ. ಆದರೆ, ನಮ್ಮಲ್ಲಿ ಹಲವು ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಯಾವುದೇ ಅಡ್ಡಪರಿಣಾಮ ಬೀರದೆ ಇದ್ದರೆ, ಮುಂದೆ ಲಸಿಕೆ ತೆಗೆದುಕೊಳ್ಳೋಣ ಎನ್ನುವ (ಕಾದು ನೋಡುವ)ತಂತ್ರ ಅನುಸರಿಸುತ್ತಿದ್ದಾರೆ. ಹಿತ್ತಲ ಗಿಡ ಮದ್ದಲ್ಲ ಎಂಬ ಭಾವನೆ ಹೋಗಬೇಕು. ಈಗಾಗಲೇ ಹಲವು ಹಿರಿಯ ಹಾಗೂ ನುರಿತ ವೈದ್ಯರು ಕೋವಿಡ್ ಲಸಿಕೆ ಹಾಕಿಸಿಕೊಂಡು ಉಳಿದವರಿಗೆ ಮಾದರಿ ಆಗಿದ್ದಾರೆ ಎಂದು ಹೇಳಿದರು.
Related Articles
Advertisement
ಮೊದಲ ಹಂತದ ಕೋವಿಡ್ ಲಸಿಕೆಯನ್ನು ನಿರ್ದಿಷ್ಟ ಸಮಯದ ಒಳಗಾಗಿ ನೀಡಬೇಕು ಎಂದು ಯಾವುದೇ ಗಡವು ನೀಡಿಲ್ಲ. ಆದರೆ, ಮುಂದಿನ ಒಂದುವಾರ ಅಥವಾ 10 ದಿನಗಳ ಒಳಗಾಗಿ ಮೊದಲ ಹಂತದಲ್ಲಿ ಗುರುತಿಸಿರುವ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣವಾಗಲಿದೆ. ಎರಡನೇ ಹಂತದಲ್ಲಿ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿ 50 ಸಾವಿರ ಜನ ಕೊರೊನಾ ವಾರಿಯರ್ಸ್‌ಗಳನ್ನು ಗುರುತಿಸಲಾಗಿದ್ದು, ಈಗಾಗಲೇ 30 ಸಾವಿರ ಜನರ ಪಟ್ಟಿ ಸಿದ್ಧಪಡಿಸಿಕೊಳ್ಳಲಾಗಿದೆ. ಸರ್ಕಾರದ ನಿರ್ದೇಶನದ ಅನುಸಾರ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಪ್ರಾರಂಭಿಸಲಾಗುವುದು ಎಂದರು.
ಇನ್ನು ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವವರಿಗೆ 28 ದಿನಗಳ ನಂತರ ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗುವುದು ಕೋವಿಡ್ ಲಸಿಕೆ ಹಾಗೂ ಪಲ್ಸ್ ಪೋಲಿಯೊ ಲಸಿಕೆ ನೀಡಲು ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೀಗಾಗಿ, ಪಲ್ಸ್ ಪೋಲಿಯೊ ವೇಳೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಆಯುಕ್ತರು ಮಾಹಿತಿ ನೀಡಿದರು.