Advertisement

ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ: ಕುಮಾರಸ್ವಾಮಿ

09:13 AM Mar 28, 2022 | Team Udayavani |

ಬೆಂಗಳೂರು: ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ ಹತ್ತನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ತ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಆಲ್ ದಿ ಬೆಸ್ಟ್ ಹೇಳಿದ ಸಿಎಂ ಬೊಮ್ಮಾಯಿ

ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ʼಬೇಟಿ ಬಚಾವೋ, ಬೇಟಿ ಪಡಾವೋʼ ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಎಚ್ ಡಿಕೆ ಟ್ವೀಟ್ ಮಾಡಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next