Advertisement

ಭಯೋತ್ಪಾದನೆ ಸಮರ್ಥಿಸಿಕೊಳ್ಳಬೇಡಿ:ಮಲಿಕ್ ಶಿಕ್ಷೆ ತೀರ್ಪು ಟೀಕಿಸಿದ IOCಗೆ ಭಾರತ ತಿರುಗೇಟು

12:32 PM May 28, 2022 | Team Udayavani |

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಗೆ ದೆಹಲಿಯ ಎನ್ ಐಎ ಕೋರ್ಟ್ ವಿಧಿಸಿರುವ ಶಿಕ್ಷೆಗೆ ಕಟು ಟೀಕೆ ವ್ಯಕ್ತಪಡಿಸಿರುವ ಐಒಸಿ-ಐಪಿಎಚ್ ಆರ್ ಸಿ (ಇಸ್ಲಾಮಿಕ್ ಸಹಕಾರ ಸಂಘಟನೆಯ ಸ್ವತಂತ್ರ ಖಾಯಂ ಮಾನವ ಹಕ್ಕುಗಳ ಆಯೋಗ) ವಿರುದ್ಧ ಭಾರತ ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ಸ್ವೀಕಾರಾರ್ಹವಲ್ಲದ ಹೇಳಿಕೆ ಎಂದು ಭಾರತ ತಿರುಗೇಟು ನೀಡಿದೆ.

Advertisement

ಇಡೀ ವಿಶ್ವವೇ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಬಯಸುತ್ತಿದೆ. ಯಾವುದೇ ಕಾರಣಕ್ಕೂ ಇಸ್ಲಾಮಿಕ್ ಸಹಕಾರ ಸಂಘಟನೆಗಳು ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳಬಾರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಾಮ್ ಬಾಗ್ಚಿ ಪ್ರತಿಕ್ರಿಯೆ ನೀಡಿದ್ದಾರೆ.

“ಯಾಸಿನ್ ಮಲಿಕ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಿ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಟೀಕೆ ವ್ಯಕ್ತಪಡಿಸಿರುವ ಐಒಸಿಯ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಭಾರತ ತಿಳಿಸಿದೆ. ಅಲ್ಲದೇ ಈ ಪ್ರತಿಕ್ರಿಯೆ ಮೂಲಕ ಐಒಸಿ-ಐಪಿಎಚ್ ಆರ್ ಸಿ ಯಾಸಿನ್ ಮಲಿಕ್ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ ಎಂದು ಅರಿಂದಾಮ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಯಾಸಿನ್ ಮಲಿಕ್ ವಿರುದ್ಧ ಎನ್ ಐಎ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಐಒಸಿ-ಐಪಿಎಚ್ ಆರ್ ಸನಿ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಅರಿಂದಾಮ್ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next