Advertisement

ಸ್ಯಾಂಟ್ರೋ ರವಿ ಪರಿಚಯವಿಲ್ಲ, ಅವನ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಸಚಿವ ಆರಗ ಜ್ಞಾನೇಂದ್ರ

11:33 AM Jan 05, 2023 | Team Udayavani |

ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ ಯಾವುದಾದರೂ ದೂರುಗಳಿದ್ದರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ನೀಡಲಾಗುವ ಕೇಂದ್ರ ಗೃಹ ಸಚಿವಾಲಯದ ಪ್ರಶಸ್ತಿಗೆ ಪಾತ್ರರಾದ ವಿಜೇತರಿಗೆ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸ್ಯಾಂಟ್ರೋ ರವಿ ಎಂಬುವರ ಬಗ್ಗೆ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿಯವರಿಗೆ ಹೆಚ್ಚಿನ ಮಾಹಿತಿ ಇರಬೇಕು, ಏನೇ ಇದ್ದರೂ ಕಾನೂನು ಕ್ರಮ ವಹಿಸಲಾಗುವುದು ಎಂದರು.

ಆತ ಯಾವುದಾದರೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಪೊಲೀಸರು ಸೂಕ್ತ ಕ್ರಮ ತೆಗೆದು ಕೊಳ್ಳುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಶಾರುಖ್ ಖಾನ್ ‘ಪಠಾಣ್’ ಚಿತ್ರದ ಪೋಸ್ಟರ್‌ ಗಳನ್ನು ಹರಿದು ಹಾಕಿದ ಬಜರಂಗದಳ ಕಾರ್ಯಕರ್ತರು

ಪ್ರಶ್ನೆಯೊಂದಕ್ಕೆ ಉತ್ತರಿಸಿದ, ಸಚಿವರು ಪ್ರತಿನಿತ್ಯ ನನ್ನನ್ನು ನೂರಾರು ಜನರು ಅಹವಾಲು ಸಲ್ಲಿಸಲು ಭೇಟಿಯಾಗುತ್ತಾರೆ, ಕಾಣಲು ಬರುವ ಎಲ್ಲರ ಹಿನ್ನೆಲೆ ಚರಿತ್ರೆ ಬಗ್ಗೆ ಮಾಹಿತಿ ಇರುವುದಿಲ್ಲ ಎಂದರು.

Advertisement

ರಾಜ್ಯದ ಪೊಲೀಸ್ ಇಲಾಖೆಗೆ ದೇಶದಲ್ಲಿಯೇ ಸೇವಾನಿಷ್ಟೆ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದೆ ಎಂದ ಸಚಿವರು, ಇಂದು ಪ್ರದಾನ ಮಾಡಲ್ಪಟ್ಟ ಗೌರವವು ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಪ್ರೇರಣೆಯಾಗಲಿದೆ ಎಂದರು.

ಇಲಾಖೆಯ ಸಿಬ್ಬಂದಿಗಳ ದಕ್ಷತೆ ಹೆಚ್ಚಿಸಲು ಸರಕಾರ ಹತ್ತು ಹಲವು ಯೋಜನೆ ಗಳನ್ನು ಹಮ್ಮಿಕೊಂಡಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು, ಆದ್ಯತೆಯ ಮೇಲೆ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ಅಪರ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next