ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಉತ್ತಮ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಅವರೇ ಮುಂದಿನ ಮುಖ್ಯಮಂತ್ರಿ ಎಂಬುದು ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ ಪ್ರತಾಪ ರೂಢಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಉತ್ತಮ ಆಡಳಿತಗಾರರು. ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಅಷ್ಟೊಂದು ಮಾಹಿತಿ ಇಲ್ಲದೆ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ.
ಬಿಹಾರದಲ್ಲಿ ರಾಜಕೀಯ ಕಲುಷಿತಗೊಂಡಿದ್ದು, ಆಡಳಿತ ಪಕ್ಷಗಳಲ್ಲಿಯೇ ತಿಕ್ಕಾಟ ಆರಂಭವಾಗಿವೆ. ಈ ತಿಕ್ಕಾಟ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಲಿದೆ. ಅಭಿವೃದ್ಧಿಗಿಂತ ಇವರ ತಿಕ್ಕಾಟ ಸರಿದೂಗಿಸುವುದು ದೊಡ್ಡ ಕೆಲಸವಾಗಿದೆ. ಸಿಎಂ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ಕುರ್ಚಿಯ ಬುಡ ಸಡಿಲವಾಗಿದೆ ಎಂದು ಹೇಳಿದರು.