Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ಬಗ್ಗೆ ಆತಂಕಪಡಬೇಕಿಲ್ಲ. ರಾಜ್ಯ ಸರಕಾರದ ಮೇಲೆ ಭರವಸೆಯಿಡಿ. ಕೋವಿಡ್ ಪ್ರಕರಣಗಳು ಹೆಚ್ಚಾಗದಂತೆ ನಿಯಂತ್ರಣ ಕ್ರಮಗಳು ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆಗೆ ಸರಕಾರ ಈಗಾಗಲೇ ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
Related Articles
Advertisement
ವಾರದಲ್ಲಿ ಎರಡು ದಿನ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ನಗರ ಕೋವಿಡ್ ಉಸ್ತುವಾರಿಯೂ ಆಗಿರುವ ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ನಡೆಸಿದ ಸಭೆಯಲ್ಲಿ ಪ್ರಸ್ತಾಪವಾಯಿತು. ಬಿಜೆಪಿ ಶಾಸಕರಷ್ಟೇ ಅಲ್ಲದೆ ಕಾಂಗ್ರೆಸ್ ಶಾಸಕರೂ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ಮುಂದೆ ಮತ್ತೆ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲ. ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ವಾರದಲ್ಲಿ ಎರಡು ದಿನ ಲಾಕ್‌ಡೌನ್ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಪ್ರಸ್ತಾಪ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಅಶೋಕ್ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ತೀರಾ ತುರ್ತು ಹೊರತುಪಡಿಸಿ ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವವರನ್ನು ಹಾಗೂ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಹೋಗುವುದು ನಿಷೇಧಿಸಬೇಕು. ಅಂತರ ಜಿಲ್ಲೆ ಹಾಗೂ ರಾಜ್ಯಗಳ ನಡುವೆ ಸಂಚಾರ, ಓಡಾಟಕ್ಕೆ ಅವಕಾಶ ಕೊಟ್ಟ ಬಳಿಕವೇ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ, ಅದಕ್ಕೆ ಕಡಿವಾಣ ಹಾಕಬೇಕು ಎಂಬ ಸಲಹೆಯೂ ಕೇಳಿಬಂದಿತು ಎಂದು ಹೇಳಲಾಗಿದೆ.
ಅನ್ಯ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ಇದೇ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಕೈ ಬಿಟ್ಟಿರುವ ರಾಜ್ಯ ಸರ್ಕಾರ ಯಾವುದೇ ರಾಜ್ಯದಿಂದ ಬಂದರೂ ಹದಿನಾಲ್ಕು ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ನೀಡಿದೆ. ಈ ಮೊದಲು ಮಹಾರಾಷ್ಟ್ರದಿಂದ ಬಂದವರಿಗೆ ಏಳು ದಿನ ಸಾಂಸ್ಥಿಕ ಹಾಗೂ ಏಳು ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿತ್ತು.ಆದರೆ, ತಮಿಳುನಾಡು ಹಾಗೂ ದೆಹಲಿಯಿಂದ ಬಂದವರಿಗೆ ಮೂರು ದಿನ ಸಾಂಸ್ಥಿಕ ಹಾಗೂ ಹನ್ನೊಂದು ದಿನ ಹೋಂ ಕ್ವಾರಂಟೈನ್ ಕಡ್ಡಾಯವಾಗಿತ್ತು. ಮೊದಲು ದೆಹಲಿ ಹಾಗೂ ತಮಿಳುನಾಡಿನಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ತೆಗೆದು ಹಾಕಿದ್ದ ಸರ್ಕಾರ ಇದೀಗ ಮಹಾರಾಷ್ಟ್ರದಿಂದ ಬಂದವರಿಗೂ ಸಾಂಸ್ಥಿಕ ಕ್ವಾರಂಟೈನ್ ತೆಗೆದುಹಾಕಿದೆ. ಮಹಾರಾಷ್ಟ್ರ ಸೇರಿ ಯಾವುದೇ ರಾಜ್ಯದಿಂದ ಬಂದರೂ ಹದಿನಾಲ್ಕು ದಿನ ಹೋಂ ಕ್ವಾರಂಟೈನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ಪ್ರಸಾದ್ ಆದೇಶ ಹೊರಡಿಸಿದ್ದಾರೆ.