Advertisement
ಸೆ. 23ರಂದು ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಳ್ಳಾರಿ ವಿಭಾಗದ ಬಿಜೆಪಿ ಪದಾಧಿ ಕಾರಿಗಳ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
Related Articles
Advertisement
ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಪಕ್ಷವನ್ನು ಅಧಿಕಾರಕ್ಕೆ ತರೋಣ. ಬರುವ ಚುನಾವಣೆಯಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ಹತ್ತು ಕ್ಷೇತ್ರಗಳಲ್ಲಿ ಹತ್ತೂ ಕ್ಷೇತ್ರಗಳನ್ನು ಗೆಲ್ಲುವಂತೆ ಮಾಡಲು ಹಕ್ಕರಾಯನಂತಿರುವ ಶ್ರೀರಾಮುಲು ಬುಕ್ಕರಾಯನಂತಿರುವ ನಾನು ಮಾಡುತ್ತೇವೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನ ಮಾತನಾಡಿ, ಎಸ್.ಟಿ. ಸಮಾವೇಶಕ್ಕೆ ಕನಿಷ್ಟ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅಷ್ಟು ಜನ ಸೇರಿಸುವ ಶಕ್ತಿ ಅಖಂಡ ಬಳ್ಳಾರಿ ಜಿಲ್ಲೆಗಿದೆ. ಶ್ರೀರಾಮುಲು ಮತ್ತು ಆನಂದ್ ಸಿಂಗ್ ಜೋಡೆತ್ತುಗಳಾಗಿ ಕೆಲಸ ಮಾಡಲಿದ್ದಾರೆ. ಬಳ್ಳಾರಿಯ ಶಕ್ತಿ ಬಗ್ಗೆ ರಾಜ್ಯಕ್ಕೆ ಗೊತ್ತಿದೆ ಎಂದರು.
ಮೀಸಲಾತಿ ಹೆಚ್ಚಿಸಿ: ನಗರ ಶಾಸಕ ಸೋಮಶೇಖರ ರೆಡ್ಡಿ ಮಾತನಾಡಿ, ಎಸ್ಟಿ ಸಮುದಾಯಕ್ಕೆ ಈಗ ಅವರು ಕೇಳುತ್ತಿರುವ ಶೇ. 7.5ರಷ್ಟು ಮೀಸಲಾತಿ ನೀಡಬೇಕು. ಜೊತೆಗೆ ಎಸ್ಸಿ ಸಮುದಾಯಕ್ಕೂ ಮೀಸಲಾತಿ ಘೋಷಿಸಬೇಕು. ಆಗಮಾತ್ರ ಬರುವ ಚುನಾವಣೆಯಲ್ಲಿ ಎಲ್ಲ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಾತಿ ಘೋಷಿಸಬೇಕು ಎಂದು ಸಚಿವರನ್ನು ಒತ್ತಾಯಿಸಿದರು. ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಮಾತನಾಡಿದರು. ಸಭೆಯಲ್ಲಿ ಸಂಸದ ವೈ. ದೇವೇಂದ್ರಪ್ಪ, ರೈತ ಮೋರ್ಚಾದ ಗುರುಲಿಂಗನಗೌಡ, ಎಸ್.ಟಿ. ಮೋರ್ಚಾದ ದಿವಾಕರ, ಶಾಸಕ ಸೋಮಲಿಂಗಪ್ಪ, ಶಿವನಗೌಡ ನಾಯಕ್, ಜಗಳೂರಿನ ಎಸ್.ವಿ.ರಾಮಚಂದ್ರ, ಎನ್.ವೈ. ಗೋಪಾಲಕೃಷ್ಣ, ಬಸವರಾಜ ದಡೆಸೂಗೂರ, ಪರಣ್ಣ ಮುನವಳ್ಳಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಶಾಸಕ ಚಂದ್ರನಾಯ್ಕ, ಪ್ರತಾಪಗೌಡ ಪಾಟೀಲ್, ನೇಮಿರಾಜ ನಾಯ್ಕ, ಟಿ.ಎಚ್. ಸುರೇಶಬಾಬು, ಮಾಜಿ ಸಂಸದೆ ಜೆ. ಶಾಂತಾ, ಪೂಜಪ್ಪ, ಬಳ್ಳಾರಿ ಜಿಲ್ಲಾಧ್ಯಕ್ಷ ಮುರಹರಿಗೌಡ, ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಕೊಪ್ಪಳ ಪ್ರಭಾರಿ ಪ್ರಭು ಕಪ್ಪಗಲ್ ಸೇರಿದಂತೆ ಹಲವರು ಇದ್ದರು.