ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರಲ್ಲಿ ಮನವಿ ಮಾಡಿದ್ದಾರೆ.
“ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಡೆಲ್ಟಾ ಪ್ಲಸ್ ಹರಡದಂತೆ ಕೂಡಲೇ ಕ್ರಮ ವಹಿಸಿ: ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಖಾನ್, ರಾಘವೇಂದ್ರ ಹಿಟ್ನಾಳ್ ಸೇರದಂತೆ ಕೆಲ ಶಾಸಕರು ಸಿದ್ದರಾಮಯ್ಯನವರೇ ನಮ್ಮ ಮುಂದಿನ ಸಿಎಂ ಎಂದು ಹೇಳಿಕೆ ನೀಡಿದ್ದರು. ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸೂಚಿಸಿದ್ದರು.
ಇದನ್ನೂ ಓದಿ:ಸುತ್ತೂರು ಮಠಕ್ಕೆ ಪರಮೇಶ್ವರ್ ಭೇಟಿ : ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗಳು