Advertisement

ಮಕ್ಕಳನ್ನು ದುಡಿಮೆಗೆ ಹಚ್ಚಬೇಡಿ: ಬಂಗಾರಪ್ಪನವರ

06:06 AM Jun 13, 2020 | Suhan S |

ಅಥಣಿ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ತಾಪಂ ಇಒ ರವಿ ಬಂಗಾರಪ್ಪನವರ ಚಾಲನೆ ನೀಡಿದರು. ನಂತರ ಮಾತನಾಡಿದ ಆವರು, 14 ವರ್ಷದೊಳಗಿನ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಬಳಕೆ ಮಾಡುವುದು ಕಾನೂನು ಪ್ರಕಾರ ಅಪರಾಧ. ಚಿಕ್ಕ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಂಡವರ ವಿರುದ್ಧ ಪ್ರಕರಣ ದಾಖಲಾಗುತ್ತದೆ. ಜೈಲು ಸೇರುವುದರ ಜೊತೆಗೆ 50 ಸಾವಿರ ವರೆಗೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisement

ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ನಗರಾಭಿವೃದ್ಧಿ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಅಭಿಯಾನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಅರಿವು ಮೂಡಿಸಿತು. ಸಮಾಜ ಕಲ್ಯಾಣ ಇಲಾಖೆ ಅ ಧಿಕಾರಿ ಬಿ.ಎಸ್‌. ಯಾದವಾಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next