Advertisement

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬೇಡಿ: ಎಚ್‍ಡಿಕೆ

12:57 AM Oct 27, 2019 | Team Udayavani |

ಬೆಂಗಳೂರು: ದೇಶದ ಕೃಷಿ ವಲಯಕ್ಕೆ ಮಾರಕವಾಗಿರುವ “ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ)’ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿದೆ.

Advertisement

ಇದರಿಂದಾಗಿ ದೇಶದ ಗುಡಿ ಕೈಗಾರಿಕೆ, ಹೈನುಗಾರಿಕೆ ಸೇರಿ ಇನ್ನಿತರ ವಲಯಗಳ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಇದನ್ನು ಕೇಂದ್ರ ಸರ್ಕಾರ ಮೊದಲು ಅರಿಯಬೇಕು ಎಂದು ತಿಳಿಸಿದರು. ನ್ಯೂಜಿಲ್ಯಾಂಡ್‌, ಆಸ್ಪ್ರೆಲಿಯಾದಂತಹ ಮುಂದುವರಿದ ದೇಶಗಳಲ್ಲಿ ಕೃಷಿಗೆ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಅಲ್ಲಿ ಯಾಂತ್ರಿಕ ಬೇಸಾಯ ಹೆಚ್ಚಾಗಿದ್ದು, ಕಡಿಮೆ ಖರ್ಚಿನಲ್ಲಿ ಕೃಷಿ, ಹೈನುಗಾರಿಕೆ ಉತ್ಪನ್ನಗಳನ್ನು ಉತ್ಪಾದನೆ ಮಾಡಬಹುದಾಗಿದೆ.

ಹೀಗಾಗಿ, ಆ ದೇಶದ ಉತ್ಪನ್ನಗಳನ್ನು ಅವರು ತೆರಿಗೆ ಇಲ್ಲದೇ ಸ್ಪರ್ಧಾತ್ಮಕ ಬೆಲೆಗೆ ನೀಡಲಿದ್ದಾರೆ. ಇದರಿಂದಾಗಿ ನಮ್ಮ ದೇಶದ ಕೃಷಿ, ಹೈನುಗಾರಿಕೆ ನಷ್ಟಕ್ಕೆ ಸಿಲುಕಿ, ಉದ್ಯೋಗ ಕ್ಷೇತ್ರಕ್ಕೂ ಹೊಡೆತ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈಗಾಗಲೇ ಜೆಡಿಎಸ್‌ ಪಕ್ಷ ಈ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಂಡಿದೆ. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ದೇಶದ ಕೃಷಿ ವಲಯದ ಮೇಲೆ ಗಂಭೀರ ಪ್ರಭಾವ ಬೀರುವ ಇಂತಹ ಒಪ್ಪಂದಕ್ಕೆ ಮನ್ನಣೆ ನೀಡಬಾರದು ಎಂದು ಅವರು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next