Advertisement

“ಟಿಪ್ಪು ಚರಿತ್ರೆ ಪಠ್ಯದಿಂದ ತೆಗೆಯಬೇಡಿ’: ಸಲೀಂ ಅಹಮದ್‌

12:03 AM Mar 26, 2022 | Team Udayavani |

ಬೆಂಗಳೂರು: ಟಿಪ್ಪು ಸುಲ್ತಾನ್‌ ಚರಿತ್ರೆಯ ಹಲವಾರು ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕಾಂಗ್ರೆಸ್‌ನ ಸಲೀಂ ಅಹಮದ್‌ ಸರಕಾರವನ್ನು ಒತ್ತಾಯಿಸಿದರು.

Advertisement

ಶುಕ್ರವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಅವರು, ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಇತ್ತೀಚೆಗೆ ನೀಡಿರುವ ವರದಿಯಲ್ಲಿ ಟಿಪ್ಪು ಸುಲ್ತಾನ್‌ ಅವರ ಚರಿತ್ರೆ ಇರುವ ಹಲವಾರು ವಿಷಯಗಳನ್ನು ತೆಗೆದುಹಾಕುತ್ತಿರುವುದು ಗೊತ್ತಾಗಿದೆ. ಇದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ತಯಾರು ಮಾಡಿರುವ ವರದಿಯಾಗಿದೆ. ಆದ್ದರಿಂದ ಈ ವರದಿ ಜಾರಿ ಗೊಳಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ಸರಕಾರದ ಕರ್ತವ್ಯ
ಸರ್ವಧರ್ಮ ಸಹಿಷ್ಣು, ವೈಜ್ಞಾನಿಕ ಮನೋಭಾವವುಳ್ಳ ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಟಿಪ್ಪು ಸುಲ್ತಾನ್‌ ಅವರ ಚರಿತ್ರೆಯನ್ನು ಸಂಪೂರ್ಣವಾಗಿ ನಾಡಿನ ಮಕ್ಕಳಿಗೆ ತಿಳಿಸುವುದು ಮತ್ತು ಅರಿವು ಮೂಡಿಸುವುದು ಸರಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ವರದಿಯನ್ನು ಜಾರಿಗೊಳಿಸಬಾರದು ಎಂದು ಪುನರುತ್ಛರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಸಚಿವರಿಂದ ಉತ್ತರ ಕೊಡಿಸಲಾಗುವುದು ಎಂದು ಹೇಳಿದರು.

ಕೈಬಿಡುವ ಪ್ರಸ್ತಾವ ಇಲ್ಲ: ಬಿ.ಸಿ. ನಾಗೇಶ್‌
ಬೆಂಗಳೂರು: ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್‌ ವಿಷಯ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದುದ್ದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಪ್ಪು ವಿಚಾರದಲ್ಲಿ ಮಾಧ್ಯಮಗಳು ಊಹಾಪೋಹ ಗಳನ್ನು ಹಾಕಬಾರದು. ಪಠ್ಯ ಪುಸ್ತಕದ ಕುರಿತು ಸದ್ಯದಲ್ಲೇ ಸುದ್ದಿ ಗೋಷ್ಠಿ ನಡೆಸಿ ಈ ಬಗ್ಗೆ ವಿವರವಾಗಿ ಮಾಹಿತಿ ಕೊಡುತ್ತೇನೆ. ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆ ಯಾಗಿದೆ. ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಲ್ಲ ಅದನ್ನು ಪರಿಚಯಿಸುವ ಪ್ರಯತ್ನ ಮಾಡಿದ್ದೇವೆ. ಏನೇನು ದೋಷಗಳು ಆಗಿದ್ದವು, ತಾಂತ್ರಿಕ ತಪ್ಪುಗಳು ಆಗಿದ್ದವು ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಮಕ್ಕಳು ಓದಲೇ ಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next