ನವದೆಹಲಿ:ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಗುರುವಾರ(ನವೆಂಬರ್ 11) ದೇಶದಲ್ಲಿನ ಕೋವಿಡ್ ಲಸಿಕೆ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು. ಅಲ್ಲದೇ ಕೋವಿಂಡ್ ಸೋಂಕನ್ನು ನಿಯಂತ್ರಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರುವಂತೆ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಳೆಗೆ ಚೆನ್ನೈ ತತ್ತರ: ಪ್ರಜ್ಞಾಹೀನ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಪೊಲೀಸ್
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರುಗಳ ಜತೆ ಕೋವಿಡ್ ಲಸಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಮನ್ಸುಖ್, ಯಾವುದೇ ಕಾರಣಕ್ಕೂ ಕೋವಿಡ್ ಸೋಂಕು ಅಂತ್ಯಗೊಂಡಿದೆ ಎಂದು ಭಾವಿಸಬೇಡಿ ಎಂಬುದಾಗಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ಮತ್ತೆ ಬರಲ್ಲ ಎಂದು ಭಾವಿಸಬಾರದು. ಜಿಲ್ಲೆಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಕೋ ವಿನ್ ಅನ್ನು ಬಳಕೆ ಮಾಡಬಹುದು ಎಂದು ಸಚಿವ ಮನ್ಸುಖ್ ಸಭೆಯಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಧನ್ವಂತರಿ ದಿವಸದ ಅಂಗವಾಗಿ ಕೇಂದ್ರ ಸರ್ಕಾರ ನವೆಂಬರ್ 2ರಂದು ಮನೆ, ಮನೆಗೆ ಕೋವಿಡ್ ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಈ ಅಭಿಮಾನದ ಮೂಲಕ ಗರಿಷ್ಠ ಪ್ರಮಾಣದ ಪ್ರಥಮ ಮತ್ತು ಎರಡನೇ ಕೋವಿಡ್ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಮನ್ಸುಖ್ ತಿಳಿಸಿದರು.