Advertisement

ಕಾಂಗ್ರೆಸ್ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬೇಡ : ಗುಂಡೂರಾವ್ ಕಿಡಿ

05:58 PM Aug 25, 2021 | Team Udayavani |

ಪಣಜಿ : ರಾಜ್ಯದ ಜನರು ಇಂಧನ ದರ ಹೆಚ್ಚಳ, ವಿವಿಧ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಹೀಗೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೂ ಕೂಡ ಬಿಜೆಪಿಯು ಕಾಂಗ್ರೇಸ್ ಪಕ್ಷವನ್ನು ಟೀಕಿಸುತ್ತಲೇ ಇದೆ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಪ್ರಮೋದ್ ಸಾವಂತ್ ನೇತೃತ್ವದ ರಾಜಯ ಬಿಜೆಪಿ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ.

Advertisement

ಗೋವಾದ ಸಾಂಗೆಯಲ್ಲಿ ಆಯೋಜಿಸಿದ್ದ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನುದ್ದೇಶಿ ಮಾತನಾಡಿದ  ಗುಂಡೂರಾವ್, ರಾಜ್ಯದ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ರವರು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿದ್ದರೆ ಪುರಾವೆಗಳೊಂದಿಗೆ ಸಾಬೀತುಪಡಿಸಲಿ. ಚುನಾವಣೆ ಸಮೀಪಿಸುತ್ತಿದ್ದಂತೆ ಕೇವಲ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಬೇಡಿ. ಅಧಿಕಾರದಲ್ಲಿದ್ದರೂ ಕೂಡ  ಬಿಜೆಪಿ ಪಕ್ಷದ ನಾಯಕರು 10 ವರ್ಷಗಳ ಕಾಲ ಏಕೆ ಸುಮ್ಮನೆ ಕುಳಿತುಕೊಂಡಿದ್ದಾರೆ..? ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮುಂಗಾರು ಚಟುವಟಿಕೆಯಲ್ಲಿ ರೈತರು ತಲ್ಲೀನ; ಉತ್ತಮ ಬೆಳೆ ನಿರೀಕ್ಷೆಯಲ್ಲಿ ಅನ್ನದಾತರು

ಇನ್ನು, ಚುನಾವಣೆಯ ಕುರಿತಾಗಿ ಮಾತನಾಡಿದ ಅವರು,  ಫೆಬ್ರವರಿ 2022 ರಲ್ಲಿ ಗೋವಾ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರು ಹೆಚ್ಚಿನ ಸಮಯ ನೀಡಬೇಕು ಎಂದ ಅವರು, ಸಾಂಗೆ ಮತಕ್ಷೇತ್ರದಲ್ಲಿ ಇನ್ನು ಒಂದು ತಿಂಗಳಲ್ಲಿ 5000 ಸದಸ್ಯರನ್ನು ಮಾಡುವ ಜವಾಬ್ದಾರಿಯನ್ನು ಪ್ರತಿಯೊಬ್ಬ ಕಾಂಗ್ರೇಸ್ ಕಾರ್ಯಕರ್ತರು ಹೊರಬೇಕು ಎಂದಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೇಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ : ಗೋವಾ : ಕಾಂಗ್ರೇಸ್ ನ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ಆಗಮನ  

Advertisement

Udayavani is now on Telegram. Click here to join our channel and stay updated with the latest news.

Next