Advertisement

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

05:39 PM Mar 30, 2023 | Team Udayavani |

ವಿಜಯಪುರ : ಮತದಾರ ಬದಲಾಗದ ಹೊರತು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಗಲು ಸಾಧ್ಯವಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಮತದಾರರು ತಮ್ಮ ಭಾವನೆಗಳಿಗೆ ಸ್ಪಂದಿಸುವ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ಹೀಗಾಗಿ ಮತದಾರ ಚುನಾವಣೆಯಲ್ಲಿ ಪ್ರಜ್ಞಾವಂತಿಕೆ ಮೆರೆಯಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

Advertisement

ಗುರುವಾರ ನಗರದಲಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದೀಗ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕದೇ, ಜನಸಂಪರ್ಕದಲ್ಲಿರುವ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುವ, ನಾಡಿನ ಕಾಳಜಿ ಇರುವ ಸಭ್ಯರಿಗೆ ಮತನೀಡಿ ಗೆಲ್ಲಿಸಿಕೊಳ್ಳುವಲ್ಲಿ ಮುಂದಾಗಬೇಕು ಎಂದರು.

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕುಕ್ಕರ್, ಹಣದಂಥ ಕಾಣಿಕೆ ಹಂಚುವುದನ್ನು ಜನರು ಸಹಿಸಿಕೊಳ್ಳುವುದು ಸರಿಯಲ್ಲ. ಮತದಾರ ಕೆಟ್ಟಾಗಲೇ ರಾಜಕೀಯ ವ್ಯಕ್ತಿಗಳು ಕಾಣಿಕೆ ಕೊಡುವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಲು ಮುಂದಾಗುತ್ತಾರೆ. ಕಾಣಿಕೆ ನೀಡುವ ಹಾಗೂ ಸ್ವೀಕರಿಸುವ ವ್ಯವಸ್ಥೆಗೆ ಕಡಿವಾಣ ಹಾಕಲು ಮತದಾರರೇ ಮನಸ್ಸು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇಷ್ಟಕ್ಕೂ ಚುನಾವಣೆಯಲ್ಲಿ ರಾಜಕಾರಣಿಗಳು ಕೊಡುವ ಹಣ-ವಸ್ತುಗಳಿಂದಲೇ ಜನರು ಜೀವನ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದ ಸಭಾಪತಿ ಹೊರಟ್ಟಿ, ಈ ದುರವ್ಥೆ ಬದಲಾವಣೆ ವಿಷಯದಲ್ಲಿ ರಾಜಕೀಯ ಮಂದಿ ಎಷ್ಟೇ ಅಬ್ಬರಿಸಿದರೂ ಬದಲಾವಣೆ ಅಸಾಧ್ಯ. ಮತದಾರರೇ ಬದಲಾದಲ್ಲಿ ಶೇ.30-40 ರಷ್ಟು ಬದಲಾವಣೆ ತರಲು ಸಾಧ್ಯವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next