Advertisement

ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಅಲೆದಾಡಿಸದಿರಿ- ಸಂಸದ ಪಿ.ಸಿ.ಗದ್ದಿಗೌಡರ

05:09 PM Sep 11, 2024 | Team Udayavani |

■ ಉದಯವಾಣಿ ಸಮಾಚಾರ
ಬಾಗಲಕೋಟೆ: ಫಲಾನುಭವಿಗಳನ್ನು ಅನಗತ್ಯವಾಗಿ ಅಲೆದಾಡಿಸುವ ಪದ್ದತಿ ಬಿಟ್ಟು, ಪ್ರಾಥಮಿಕ ಹಂತದಲ್ಲೇ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಸೂಚಿಸಿದರು.

Advertisement

ಜಿ.ಪಂ. ಹಳೆಯ ಸಭಾಂಗಣದಲ್ಲಿ ಮಂಗಳವಾರದಂದು ಜರುಗಿದ ಲೀಡ್‌ ಬ್ಯಾಂಕ್‌ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ
ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಬ್ಯಾಂಕ್‌ ಅಧಿಕಾರಿ ಹಾಗೂ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡಿ, ರೈತರ ಮಕ್ಕಳು ಶಿಕ್ಷಣ ಸಾಲ ಸೌಲಭ್ಯಕ್ಕಾಗಿ ಬಂದಲ್ಲಿ ನಿಯಮಾವಳಿಗಳು ಸ್ವಲ್ಪ ಸರಳವಾಗಿರಲಿ. ಯಾವ ಯಾವ ದಾಖಲೆಗಳನ್ನು
ಸಲ್ಲಿಸಬೇಕು ಎಂಬುದನ್ನು ಫಲಕಗಳಲ್ಲಿ ಪ್ರದರ್ಶಿಸಿ, ತಾಂತ್ರಿಕ ತೊಂದರೆಗಳಿದ್ದಲ್ಲಿ ತಿಳಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ
ಕಾರ್ಯನಿರ್ವಹಿಸಬೇಕು ಎಂದರು.

ಬ್ಯಾಂಕ್‌ಗಳಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆ ಇರುವುದು ಕೂಡ ಅರ್ಹ ಫಲಾನುಭವಿಗಳು ಪರದಾಡಲು ಒಂದು ಕಾರಣವಾಗಿದೆ. ಈ
ಹಿನ್ನೆಲೆಯಲ್ಲಿ ವಿವಿಧ ಇಲಾಖೆಯ ಅ ಧಿಕಾರಿಗಳು ಬ್ಯಾಂಕ್‌ಗಳಿಗೆ ತೆರಳಿ ಆಸಕ್ತಿ ವಹಿಸಿ ವಿವಿಧ ಯೋಜನೆಯಡಿ ಸಿಗುವ ಸಾಲ ಸೌಲಭ್ಯ ದೊರಕಿಸಿಕೊಡಿ, ಸಣ್ಣಪುಟ್ಟ ಕಾರಣಕ್ಕೆ ತಡೆ ಹಿಡಿಯುವ ಕೆಲಸ ಮಾಡಬೇಡಿ ಎಂದು ವಿವಿಧ ನಿಗಮಗಳ ಅ ಕಾರಿಗಳನ್ನು ಎಚ್ಚರಿಸಿದರು.

ಇಂದಿನ ದಿನಮಾನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿರವದರಿಂದ ಯುವ ಸಮೂಹವನ್ನು ಸ್ವಯಂ ಉದ್ಯೋಗಕ್ಕೆ ಉತ್ತೇಜಿಸಬೇಕಾಗಿದೆ. ಕೃಷಿಗಿಂತ ಇತರೇ ಉದ್ಯಮಗಳತ್ತ ಒಲವು ತೋರುತ್ತಿರುವುದರಿಂದ ಗ್ರಾಮ
ಪಂಚಾಯ್ತಿಗಳಲ್ಲಿ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳ ಬಗ್ಗೆ ಪ್ರಚಾರ ಪಡಿಸಿ ಸೂಕ್ತ ಮಾರ್ಗದರ್ಶನ ನೀಡಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಿ ಯುವಕರು ನವ ಉದ್ಯಮಿಗಳಾಗಲು ಪ್ರೇರಪಿಸಬೇಕಾಗಿದೆ ಎಂದರು.

ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಕೆನರಾ ಬ್ಯಾಂಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳ ಅರ್ಜಿಗಳು ತಿರಸ್ಕೃತ
ಗೊಂಡಿದ್ದು, ಈ ಬಗ್ಗೆ ಬ್ಯಾಂಕ್‌ ವ್ಯವಸ್ಥಾಪಕರು ಗಮನಹರಿಸಬೇಕು. ಯಾವ ಬ್ಯಾಂಕ್‌ನಲ್ಲಿ ಅರ್ಜಿಗಳು ಬಾಕಿ ಉಳಿದಿವೆಯೋ ಅವೆಲ್ಲವೂ ಮುಂದಿನ ಹದಿನೈದು ದಿನದೊಳಗಾಗಿ ವಿಲೇವಾರಿ ಆಗಬೇಕು. ಸ್ವ ಸಹಾಯ ಗುಂಪು ಗಳಿಗೆ ಸಾಲ ನೀಡಲು ಪ್ಯಾನ್‌ ಕಾರ್ಡ್‌ ಕಡ್ಡಾಯ ಅಂತ ಇರುವುದಿಲ್ಲ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Advertisement

ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಬಾಗಲಕೋಟ ಲೀಡ್‌ ಬ್ಯಾಂಕ್‌ ಜಿಲ್ಲಾ ವ್ಯವಸ್ಥಾಪಕ ರಾಜಕುಮಾರ ಹೂಗಾರ
ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.