Advertisement

ನಾನು ಹೇಮಾ ಮಾಲಿನಿಯಾಗಲು ಬಯಸುವುದಿಲ್ಲ: ಬಿಜೆಪಿಗೆ ಜಯಂತ್ ಚೌಧರಿ ಟಾಂಗ್

04:36 PM Feb 02, 2022 | Team Udayavani |

ಮಥುರಾ: ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಅವರು ಬಿಜೆಪಿ ಸಂಸದೆ ಮತ್ತು ಪ್ರಖ್ಯಾತ ನಟಿ ಹೇಮಾ ಮಾಲಿನಿ ಅವರ ಹೆಸರನ್ನು ಮತ್ತೊಮ್ಮೆ ಚುನಾವಣಾ ಪ್ರಚಾರಕ್ಕೆ ಎಳೆತಂದಿದ್ದು, ಮಂಗಳವಾರ ಮಥುರಾದಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿ “ನಾನು ಹೇಮಾ ಮಾಲಿನಿಯಾಗಲು ಬಯಸುವುದಿಲ್ಲ, ನನ್ನನ್ನು ಮೆಚ್ಚಿಸುವುದರಿಂದ ನೀವು ಏನು ಪಡೆಯುತ್ತೀರಿ?” ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.

Advertisement

ಪ್ರತಿಭಟನೆಯಲ್ಲಿ ರೈತರ ಸಾವಿನ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಜಯಂತ್ , ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿದರು. “7 ರೈತರ ಕುಟುಂಬಗಳಿಗೆ ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಜಾಟ್ ನಾಯಕರನ್ನು ಭೇಟಿಯಾದ ಸಂದರ್ಭದಲ್ಲಿ ಜಯಂತ್ ಚೌಧರಿ ಅವರು ‘ತಪ್ಪಾದ ಮನೆ’ (ಸಮಾಜವಾದಿ ಪಕ್ಷ) ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದರು.

ಜಯಂತ್ ಚೌಧರಿ ಅವರ ಆರ್‌ಎಲ್‌ಡಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಯುಪಿ ಅಸೆಂಬ್ಲಿ ಚುನಾವಣೆ ಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿವೆ.

2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ಅವರು ಜಯಂತ್ ಚೌಧರಿಯವರನ್ನು ಭಾರಿ ಮತಗಳಿಂದ ಸೋಲಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. 2019 ರಲ್ಲೂ ಮತ್ತೆ ಬಿಜೆಪಿಯಿಂದ ಆಯ್ಕೆಯಾಗಿದ್ದರು.

Advertisement

ಠಾಕೂರ್ ತಿರುಗೇಟು

ಜಯಂತ್ ಚೌಧರಿ ಅವರು ಬಯಸಿದ್ದರೂ ಹೇಮಾ ಮಾಲಿನಿ ಆಗಲು ಸಾಧ್ಯವಿಲ್ಲ. ಅವರು, ನಟಿ ಮತ್ತು ರಾಜಕಾರಣಿಯಾಗಿ, ದೇಶ ಮತ್ತು ಜಗತ್ತಿನಲ್ಲಿ ಒಂದು ನಿಲುವನ್ನು ಹೊಂದಿದ್ದಾರೆ. ಹೇಮಾ ಜಿ ಮಥುರಾಕ್ಕಾಗಿ ನಿರಂತರವಾಗಿ ಕೆಲಸ ಮಾಡಿದ್ದಾರೆ, ಆದರೆ ಆರ್‌ಎಲ್‌ಡಿ ಕಾರ್ಯಕರ್ತರು ಸಹ ಜಯಂತ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಬೇಕು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆ ನಾಯಕ ಗುಲಾಬ್ರಾವ್ ಪಾಟೀಲ್ ಅವರು 2021 ರಲ್ಲಿ ಜಲ್ಗಾಂವ್ ಜಿಲ್ಲೆಯ ತಮ್ಮ ಕ್ಷೇತ್ರದ ರಸ್ತೆಗಳನ್ನು ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಅಸಭ್ಯವಾಗಿ ಹೋಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next