Advertisement
ಕಂಟೆ„ನ್ಮೆಂಟ್ ಝೋನ್ ಪ್ರದೇಶವಾಗಿ ಗುರುತಿಸಿಕೊಂಡಿರುವ ಹಿರೇ ಬಾಗೇವಾಡಿಯಲ್ಲಿ ಕೋವಿಡ್-19 ತಡೆಗಟ್ಟುವಿಕೆ ಹಾಗೂ ಅಲ್ಲಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಸಂಬಂಧಿಸಿದಂತೆ ಹಿರೇ ಬಾಗೇವಾಡಿ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಗ್ರಾಮಸ್ಥರ ಸಭೆ ನಡೆಸಿದ ಅವರು, ಕೋವಿಡ್ 19 ಸೋಂಕು ಸಂಪೂರ್ಣವಾಗಿ ತಡೆಗಟ್ಟಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಬೇಕು ಎಂದರು.
Related Articles
Advertisement
ಇದಕ್ಕೆ ಪ್ರತಿಕ್ರಿಯಿಸಿದ ಅರೋಗ್ಯ ಇಲಾಖೆ ಅಧಿಕಾರಿಗಳು ಮಾರ್ಗಸೂಚಿ ಪ್ರಕಾರ ಸೋಂಕಿತರು, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಗಂಟಲು ದ್ರವದ ಮಾದರಿಯನ್ನು ಮಾತ್ರ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು. ಅತೀ ಹೆಚ್ಚು ಪ್ರಕರಣ ಕಂಡುಬರುವ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಹೆ„ರಿಸ್ಕ್ ಗ್ರೂಪ್‌ನಲ್ಲಿರುವರ ಹಾಗೂ ಉಸಿರಾಟ ತೊಂದರೆ, ಜ್ವರ, ಹೃದಯ ಅಥವಾ ಕಿಡ್ನಿ ತೊಂದರೆ ಇರುವವರ ಮಾದರಿಯನ್ನು ಪರೀಕ್ಷಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಕಂಟೇನ್ಮೆಂಟ್ ಝೋನ್ ನಲ್ಲಿ ಏಪ್ರಿಲ್ ನಲ್ಲಿ 2820 ಕಾರ್ಡುದಾರರಿಗೆ ಒಟ್ಟು 870 ಕ್ವಿಂಟಲ್ ಅಕ್ಕಿ ವಿತರಿಸಲಾಗಿದೆ. ಮೇ ತಿಂಗಳ ಕೇಂದ್ರದ ಗರೀಬ್ ಕಲ್ಯಾಣ ಯೋಜನೆಯಡಿ 905 ಕ್ವಿಂಟಲ್ ಅಕ್ಕಿ ಬಂದಿರುತ್ತದೆ. ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ. ಅಕ್ಕಿ ಹಾಗೂ ಒಂದು ಕೆ.ಜಿ. ಬೇಳೆ ನೀಡಲಾಗುತ್ತಿದೆ. ಬಿಪಿಎಲ್ ಕಾರ್ಡಿಗೆ ಅರ್ಜಿ ಹಾಕಿದ್ದರೆ ಅಂತಹವರಿಗೂ ಹತ್ತು ಕೆ.ಜಿ ಅಕ್ಕಿ ಈ ತಿಂಗಳಿನಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಆಹಾರ ಮತ್ತ ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಹೇಳಿದರು.
ಗ್ರಾಮದಲ್ಲಿ 37 ಪ್ರಕರಣಗಳು ಪತ್ತೆಯಾಗಿರುವುದರಿಂದ ಕರೊನಾ ತಡೆಗಟ್ಟಲು ಇನ್ನಷ್ಟು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇದು ಕೆಂಪು ವಲಯ ಆಗಿರುವುದರಿಂದ ಸರ್ಕಾರದಿಂದ ಎಲ್ಲರಿಗೂ ಮಾಸ್ಕ್ ವಿತರಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ರೈತರು ಜಮೀನುಗಳಿಗೆ ತೆರಳಿ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುವುದು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ಕಷ್ಟವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜೇಂದ್ರ ಕೆ.ವಿ. ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಡಿಸಿಪಿ ಸೀಮಾ ಲಾಟಕರ, ಡಿಸಿಪಿ ಯಶೋಧಾ ವಂಟಗೋಡಿ, ಎಸಿಪಿ ನಾರಾಯಣ ಭರಮನಿ, ಗ್ರಾಪಂ ಅಧ್ಯಕ್ಷೆ ಕಲಾವತಿ ಧರೆಣ್ಣವರ, ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು. ಅಡವೇಶ ಇಟಗಿ, ಸಿ.ಸಿ.ಪಾಟೀಲ, ಸಯ್ಯದ್ ಖಾದ್ರಿ, ಶ್ರೀಶೈಲ್ ಫಡಗಲ್, ಬಾಪು ನಾವಲಗಟ್ಟಿ, ಶ್ರೀಕಾಂತ್ ಮಾಧುಬರಮಣ್ಣವರ ಮೊದಲಾದವರು ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.
ಇನ್ನೂ ಹೆಚ್ಚಿನ ಪರೀಕ್ಷೆ ನಡೆಯಲಿ : ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮಾತನಾಡಿ, ಹಿರೇಬಾಗೇವಾಡಿ ಗ್ರಾಮದಲ್ಲಿ ಹೆಚ್ಚು ಪ್ರಕರಣ ಕಂಡುಬಂದಿರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮೊದಲು ಅವರ ಆತಂಕ ದೂರ ಮಾಡುವ ಕೆಲಸವಾಗಬೇಕಿದೆ. ಪ್ರಕರಣ ಹೆಚ್ಚಾಗಿ ಕಂಡುಬಂದಿರುವ ಗ್ರಾಮದ ನಿರ್ದಿಷ್ಟ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಪರೀಕ್ಷೆಗಳು ನಡೆಸಬೇಕು ಎಂದರು. ಗ್ರಾಮದಲ್ಲಿ ಸರ್ಕಾರದಿಂದ ನೀಡಲಾಗುತ್ತಿರುವ ಉಚಿತ ಹಾಲು ಒದಗಿಸಬೇಕು. ತರಕಾರಿ ಮಾರಾಟಕ್ಕೆ ಗ್ರಾಮದಲ್ಲಿ ವ್ಯವಸ್ಥೆ ಕಲ್ಪಿಸಬೇಕು. ನಿರಂತರವಾಗಿ ಕೆಲಸ ಮಾಡುತ್ತಿರುವ ಆರೋಗ್ಯ, ಪೊಲೀಸ್, ಅಂಗನವಾಡಿ ಕಾರ್ಯಕರ್ತರಿಗೆ ವಿಶ್ರಾಂತಿ ನೀಡಿ, ಬೇರೆ ಕಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಶಾಸಕಿ ಹೆಬ್ಟಾಳಕರ ಹೇಳಿದರು.