Advertisement
ಶ್ರೀ ಮಠದಲ್ಲಿ 1,320 ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇರುವುದನ್ನು ಖಚಿತಪಡಿಸಿಕೊಂಡು ಈ ವಿದ್ಯಾರ್ಥಿಗಳ ಲ್ಲಿರುವ ಸಂಶಯ ಮತ್ತು ಸಂದೇಹಗಳಿಗೆ ಪರಿಹಾರ ಸೂಚಿಸುವ ಸಲುವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಲ್ಲಿ ಆತ್ಮಸ್ಥೆçರ್ಯ ತುಂಬುವುದರ ಜೊತೆಗೆ ಉತ್ಸಾಹದಿಂದ ಓದಿನಲ್ಲಿ ಪ್ರವೃತ್ತರಾಗುವಂತೆ
ಮನವೊಲಿಸುವ ಸಲುವಾಗಿ ಮಠಕ್ಕೆ ಭೇಟಿ ನೀಡಿದ್ದೇನೆಂದು ತಿಳಿಸಿದರು.
ಗಳಲ್ಲಿ ಆತ್ಮಸ್ಥೆçರ್ಯ ತುಂಬುವುದರ ಜೊತೆಗೆ ಪರೀಕ್ಷೆ ನಡೆಯುವವರೆಗೆ ಸಂಯಮ ಕಾಪಾಡಿಕೊಳ್ಳಲು ಧೈರ್ಯ ಹೇಳಲಾಗುತ್ತಿದೆ. ತಡವಾದರೂ ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡಿ ಹಾಗೂ ಪರೀಕ್ಷೆಯ ಮುನ್ನ ಪುನರ್ ಮನನ ತರಗತಿಗಳನ್ನು ನಡೆಸಿ ಪರೀಕ್ಷೆ ನಡೆಸುವ ದಿನವನ್ನು ಸರ್ಕಾರ ಶಿಕ್ಷಣ ಇಲಾಖೆಯ ಮೂಲಕ ಪ್ರಕಟಿಸಲಿದೆ ಎಂದುರು. ದೂರದರ್ಶನ ಚಂದನವಾಹಿನಿಯಲ್ಲಿ 2-3 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಕುರಿತು ವಿಷಯಾಧಾರಿತ ಸರಣಿ ಮಾಲೆಯಲ್ಲಿ ಪ್ರಸಾರಪಡಿಸಲಾಗುವುದು. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಅವುಗಳಿಗೆ ಉತ್ತರಿಸುವ ಅಭ್ಯಾಸ ಮಾಡುತ್ತಿರಬೇಕೆಂದು ಸಲಹೆ ನೀಡಿದರು.
Related Articles
Advertisement
ಶಿಕ್ಷಣ ಇಲಾಖೆ ಆಯುಕ್ತ ಡಾ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪ್ರಶ್ನೆಪತ್ರಿಕೆಗಳಿಗೆ ಸೀಮಿತವಾಗಿ ಅಧ್ಯಯನ ಮಾಡದೇ ಇಡೀ ಪಠ್ಯಪುಸ್ತಕವನ್ನು ಅರ್ಥ ಮಾಡಿಕೊಳ್ಳುವ ರೀತಿಯಲ್ಲಿ ಅಭ್ಯಾಸ ನಡೆಸಿ ಪರೀಕ್ಷೆ ಯಾವಾಗಲಾದರೂ ನಡೆಯಲಿ ಅದಕ್ಕೆ ನಾವು ಸಿದ್ಧರಾಗಿದ್ದೇವೆ ಎಂಬ ಮನೋಸ್ಥೈರ್ಯ ಮತ್ತು ಆತ್ಮವಿಶ್ವಾಸವನ್ನು ರೂಢಿಸಿಕೊಳ್ಳುವಂತೆ ತಿಳಿಸಿದರು.
ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕಾಮಾಕ್ಷಮ್ಮ ಹಾಗೂ ರೇವಣಸಿದ್ಧಪ್ಪ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.