Advertisement

ಆತಂಕ ಬೇಡ; ನಿಮ್ಮ ಜತೆಗಿದ್ದೇವೆ; ಸಿಎಂ ಬೊಮ್ಮಾಯಿಗೆ ವರಿಷ್ಠರ ಅಭಯ

12:20 AM Aug 11, 2022 | Team Udayavani |

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾದ ಯಾವುದೇ ವದಂತಿಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕೆಲಸ ಮುಂದುವರಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರು ಅಭಯ ನೀಡಿದ್ದಾರೆಂದು ಮೂಲಗಳು ಹೇಳಿವೆ. ಜತೆಗೆ ಇಂಥ ಸುಳ್ಳುಸುದ್ದಿ ಹಬ್ಬಿಸುವವರ ಪತ್ತೆಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸು ವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.

Advertisement

ಬುಧವಾರವೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಹಿತ ಪ್ರಮುಖ ನಾಯಕರು ಮತ್ತು ಸಚಿವರು ಸಿಎಂ ಬೊಮ್ಮಾಯಿ ಪರ ನಿಂತಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ, ಊಹಾ ಪೋಹಗಳಿಗೆ ಧೃತಿ ಗೆಡದೆ ಉತ್ತಮ ಕೆಲಸ ಮಾಡುವಂತೆ ಸೂಚಿಸಿದ್ದಾರೆನ್ನಲಾಗಿದೆ.

ಸಿಎಂ ಬದಲಾವಣೆ ಬಗ್ಗೆ ಪಕ್ಷ ಆಲೋಚಿಸಿಲ್ಲ. ಮುಂದಿನವಿಧಾನಸಭೆ ಚುನಾವಣೆಯನ್ನು ಬೊಮ್ಮಾಯಿ ನೇತೃ ತ್ವದಲ್ಲೇ ಎದುರಿಸುವುದಾಗಿ ವರಿಷ್ಠರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನಾಯಕತ್ವ ಬದ
ಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಎಸ್‌ವೈ ಹೇಳಿದ್ದೇನು?
ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಯಾರೂ ಈ ಬಗ್ಗೆ ಚರ್ಚಿಸಬಾರದು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಬಂದಿದ್ದಾಗ ಇಲ್ಲಿನ ರಾಜಕಾರಣದ ಬಗ್ಗೆ ಚರ್ಚಿಸಿದ್ದರೇ ಹೊರತು ನಾಯಕತ್ವದ ಕುರಿತು ಮಾತಾಡಿಲ್ಲ. ರಾಜ್ಯಾಧ್ಯಕ್ಷರು ಅವಧಿ ಮುಗಿದ ಬಳಿಕ ಬದಲಾವಣೆಯಾಗುತ್ತಾರೆ ಎಂದು ಯಡಿಯೂರಪ್ಪ ಹೇಳಿದರು. ಇದಕ್ಕೆ ನಳಿನ್‌ ಕುಮಾರ್‌, “ನನ್ನ ಅವಧಿ ಇನ್ನೂ ಇದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

ಕಾಂಗ್ರೆಸ್‌ ಕುಟುಕು
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಟ್ವೀಟ್‌ ಕುಟುಕು ಮುಂದುವರಿಸಿ ರುವ ಕಾಂಗ್ರೆಸ್‌, ಬಿಜೆಪಿ ವರಿಷ್ಠರಿಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ ಪೆಪ್ಪರ್‌ವೆುಂಟ್‌ ಇದ್ದಂತೆ. ಆಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡು ತ್ತಾರೆ. ಯಡಿಯೂರಪ್ಪ ಅವರಂಥ ವರನ್ನೇ ಹೇಳದೇ ಕೇಳದೆ ಮನೆಗೆ ಕಳು ಹಿಸಿರುವಾಗ ಬೊಂಬೆ ಬೊಮ್ಮಾಯಿ ಯಾವ ಲೆಕ್ಕ ಎಂದು ಪ್ರಶ್ನಿಸಿದೆ.

ಸುರೇಶ್‌ ಗೌಡರಿಗೆ ನಳಿನ್‌ ಎಚ್ಚರಿಕೆ
ಸಿಎಂ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ನೀಡಿರುವ ಮಾಜಿ ಶಾಸಕ ಸುರೇಶ್‌ ಗೌಡ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ದೂರವಾಣಿ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗ ಹೇಳಿಕೆ ನೀಡು ವುದು ಅಶಿಸ್ತು. ಹಾಗಾಗಿ ಇಂಥ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆನ್ನಲಾಗಿದೆ. ಉಳಿದವರಿಗೂ ಈ ಬಗ್ಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆ ನನಗೆ ಗೊತ್ತಿತ್ತು. ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಕುರಿತಂತೆ ಮಾಹಿತಿ ಇಲ್ಲ. ಆ ಬಗ್ಗೆ ಟ್ವೀಟ್‌ ಮಾಡಿ ದವರು, ಮಾತನಾಡಿರುವವರನ್ನೇ ಕೇಳಬೇಕು.
-ಸಿದ್ದರಾಮಯ್ಯ, ವಿಪಕ್ಷ ನಾಯಕ

 

Advertisement

Udayavani is now on Telegram. Click here to join our channel and stay updated with the latest news.

Next