Advertisement

Doora Teera Yana Movie: ದೂರ ತೀರದಲ್ಲಿ ಪ್ರೇಮ ಪುರಾಣ

11:07 AM Aug 21, 2024 | Team Udayavani |

ನಿರ್ದೇಶಕ ಮಂಸೋರೆ ಅವರ ಹೊಸ ಸಿನಿಮಾದ ಟೈಟಲ್‌ ಬಿಡುಗಡೆಯಾಗಿದೆ. ಚಿತ್ರಕ್ಕೆ “ದೂರ ತೀರ ಯಾನ’ ಎಂಬ ಶೀರ್ಷಿಕೆ ಇಡಲಾಗಿದ್ದು, ದೇವರಾಜ್‌ ಆರ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್‌ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್‌ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೈಟಲ್‌ ಟೀಸರ್‌ ಅನಾವರಣಗೊಳಿಸಲಾಯಿತು.

Advertisement

ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮಂಸೋರೆ, “ನನ್ನ ಹಿಂದಿನ ಚಿತ್ರಗಳನ್ನು ನೀವು ನೋಡಿದ್ದೀರಾ. ಅದನ್ನು ಮೀರಿಸುವ ಪ್ರಯತ್ನ ದೂರ ತೀರ ಯಾನ. ಈಗ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಅವರ ನಿರೀಕ್ಷೆಗಳು ಸಾಕಷ್ಟಿದೆ. ಹೀಗೆ ನಾವು ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ಅವರಿಗೆ ಬೇಕಾದ ರೀತಿಯ ಸಿನಿಮಾ ಮಾಡಬೇಕು. ಆ ನಿಟ್ಟಿನಲ್ಲಿ ಈಗ ನಾನು ಮಾಡಲು ಹೊರಟಿರುವ ಸಿನಿಮಾ ದೂರ ತೀರ ಯಾನ. ಇದೊಂದು ದಾರಿಯಲ್ಲಿ ಸಾಗುತ್ತಾ ನಡೆಯುವ ಪ್ರೇಮಕಥೆ. ಚಿತ್ರದ ಮೊದಲ ಹತ್ತು ನಿಮಿಷ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ. ಉಳಿದೆಲ್ಲಾ ದಾರಿಯಲ್ಲಿ ಸಾಗುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ – ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆಯೂ ಹೌದು. ವಿಜಯ್‌ ಕೃಷ್ಣ ನಾಯಕನಾಗಿ, ರುದ್ರ ಗರುಡ ಪುರಾಣ ಚಿತ್ರದ ಖ್ಯಾತಿಯ ಪ್ರಿಯಾಂಕ ಕುಮಾರ್‌ ನಾಯಕಿಯಾಗಿ ನಟಿಸುತ್ತಿದ್ದಾರೆ’ ಎಂದರು.

ತುಂಬಾ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ಗೆಳೆಯ ಮಂಸೋರೆ ಒಂದೊಳ್ಳೆ ಕಥೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕ ವಿಜಯಕೃಷ್ಣ. ನಾಯಕಿ ಪ್ರಿಯಾಂಕಾ ಕೂಡಾ ಪಾತ್ರದ ಬಗ್ಗೆ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next