Advertisement

ದೋರನಹಳ್ಳಿ ಸಿಲಿಂಡರ್ ಸ್ಫೋಟ ದುರಂತ: ಸಾವಿನ ಸಂಖ್ಯೆ 14 ಕ್ಕೆ ಏರಿಕೆ

07:44 PM Mar 05, 2022 | Team Udayavani |

ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪಿನಲ್ಲಿ ಫೆ.25 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್  ಸ್ಫೋಟಗೊಂಡು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು, ಅದರಲ್ಲಿ ಶನಿವಾರ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

Advertisement

ಈರಣ್ಣ ಹಣಮಂತ್ರಾಯ ಇಜೇರಿ (50) ಮತ್ತು ನಾಗಣ್ಣ ವೀರಬಸಪ್ಪ ಹಳ್ಳದ (47) ಮೃತಪಟ್ಟಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಉಳಿದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದಲ್ಲಿ ಸಾವಿನ ಮನೆಗಳೇ ಹೆಚ್ಚಾಗಿ ಕಾಣುತ್ತಿದ್ದು, ಜನರು ಕಣ್ಣೀರಿನಲ್ಲಿ ಮುಳುಗಿ ಹೋಗಿದ್ದಾರೆ.

ಈರಣ್ಣ ಹಣಮಂತ್ರಾಯ ಇಜೇರಿ, ನಾಗಣ್ಣ ವೀರಬಸಪ್ಪ ಹಳ್ಳದ ಕಲಬುರಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next