Advertisement

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಇನ್ನಿಲ್ಲ

02:07 PM May 26, 2021 | Team Udayavani |

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ(103) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಇತ್ತೀಚಿಗಷ್ಟೇ ಕೋವಿಡ್ ನಿಂದ ಗುಣಮುಖರಾಗಿದ್ದ ದೊರೆಸ್ವಾಮಿ, ಉಸಿರಾಟದ ಸಮಸ್ಯೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1918 ಏಪ್ರಿಲ್ 10ರಂದು ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ ದೊರೆಸ್ವಾಮಿ ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟದಲ್ಲೂ  ಭಾಗವಹಿಸಿದ್ದರು. ಭೂಕಬಳಿಕೆ ಹೋರಾಟದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಮಾತ್ರವಲ್ಲದೆ ಪುಸ್ತಕ ಪ್ರಕಾಶನ ಮತ್ತು  ಪತ್ರಿಕೋದ್ಯಮದಲ್ಲೂ ಛಾಪು ಮೂಡಿಸಿದ್ದರು.

1942 ರ ಹೊತ್ತಿಗೆ  ತಮ್ಮ ಬಿ.ಎಸ್.ಸಿ ಯನ್ನು ಪೂರ್ಣಗೊಳಿಸಿದ ದೊರೆಸ್ವಾಮಿ, ಉಪನ್ಯಾಸಕರಾಗಿ ಕಾಲೇಜಿನಲ್ಲಿ ಸೇರಿಕೊಂಡರು. ಕ್ವಿಟ್ ಇಂಡಿಯಾ ಸ್ವಾತಂತ್ರ್ಯ ಚಳುವಳಿಯು ಆರಂಭವಾಗಿ, 14 ತಿಂಗಳ ಕಾಲ ಮೊದಲ ಬಾರಿಗೆ ಜೈಲಿನಲ್ಲಿದ್ದಾಗ ಅವರು ಅಹಿಂಸೆ ಮತ್ತು ಸತ್ಯಾಗ್ರಹದ ಗಾಂಧಿಯವರ ಆದರ್ಶಗಳನ್ನು ಅನುಸರಿಸಲು ನಿರ್ಧರಿಸಿದರು. ನಂತರ ಅವರು ಪುಸ್ತಕ ಮಳಿಗೆ ಮತ್ತು ಪ್ರಕಾಶನ ಡಿಪೋವನ್ನು ಸ್ಥಾಪಿಸಿದರು.

ಹೆಚ್. ಎಸ್ ದೊರಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Advertisement

updating…

Advertisement

Udayavani is now on Telegram. Click here to join our channel and stay updated with the latest news.

Next