Advertisement

“ದೋಸ್ತಿ ಸರ್ಕಾರದ ಯೋಜನೆ ರದ್ದು ಮಾಡಿದರೆ ಸುಮ್ಮನಿರಲ್ಲ’

11:42 PM Aug 16, 2019 | Team Udayavani |

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ “ಅನ್ನಭಾಗ್ಯ’ ಸೇರಿದಂತೆ ಯಾವುದೇ ಯೋಜನೆ ರದ್ದುಗೊಳಿಸಿದರೆ ಸುಮ್ಮನಿರಲ್ಲ ಎಂದು ಕಾಂಗ್ರೆಸ್‌ ನಾಯಕರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Advertisement

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌, ದಿನೇಶ್‌ ಗುಂಡೂರಾವ್‌ ಹಾಗೂ ಡಿ.ಕೆ. ಶಿವಕುಮಾರ್‌ ಪ್ರತ್ಯೇಕವಾಗಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ರಾಜ್ಯ ಸರ್ಕಾರದಿಂದ 4,000 ರೂ.ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದ್ದಾರೆ.

ಈ ಯೋಜನೆ ಅನುಷ್ಠಾನಕ್ಕೆ ಹಣಕಾಸು ಹೊಂದಿಸಲು ಹಿಂದಿನ ಕಾಂಗ್ರೆಸ್‌ ಅವಧಿಯಲ್ಲಿನ ಯೋಜನೆ ಗಳಿಗೆ ಕತ್ತರಿ ಹಾಕುವ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಯೋಜನೆಗಳನ್ನು ಸ್ಥಗಿತಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next