Advertisement

ನಕ್ಷೆ ಉಲ್ಲಂಘನೆಗೆ ದುಪ್ಪಟ್ಟು ದಂಡ!

11:23 AM Jan 18, 2020 | Suhan S |

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಹಾಗೂ ಬೈಲಾ ನಿಯಮಾವಳಿ ಉಲ್ಲಂಘಿಸಿ ನಿರ್ಮಾಣವಾಗಿರುವ ಕಟ್ಟಡಗಳ ಮಾಲೀಕರಿಂದ ಆಸ್ತಿ ತೆರಿಗೆಯ ಎರಡು ಪಟ್ಟು ದಂಡ ವಸೂಲಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Advertisement

ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ನಕ್ಷೆ ಹಾಗೂ ನಿಯಮಾವಳಿ ಉಲ್ಲಂ ಸಿ ನಿರ್ಮಿಸಿರುವ ಹೆಚ್ಚುವರಿ ಕಟ್ಟಡಗಳನ್ನು ತೆರವುಗೊಳಿಸುವವರೆಗೂ ಪ್ರತಿ ವರ್ಷ ಆಸ್ತಿ ತೆರಿಗೆ ಜತೆ ಎರಡು ಪಟ್ಟು ದಂಡ ಕಟ್ಟಿಸಿಕೊಳ್ಳಲಾಗುವುದು. ಈ ನಿಯಮ ತಕ್ಷಣದಿಂದಲೇ ಅನ್ವಯವಾಗಲಿದೆ.

ಉದಾಹರಣೆಗೆ 1200 ಚದರಡಿ ಜಾಗದಲ್ಲಿ ಎರಡು ಅಂತಸ್ತು ವಸತಿ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆದು ಮೂರು ಅಥವಾ ನಾಲ್ಕು, ಅದಕ್ಕಿಂತ ಹೆಚ್ಚು ಅಂತಸ್ತು ನಿರ್ಮಾಣ ಮಾಡಿರುವುದು, ನಿಯಮಾವಳಿ ಪ್ರಕಾರ ಸೆಟ್‌ಬ್ಯಾಕ್‌ ಬಿಡದೆ ಹೆಚ್ಚುವರಿ ಕಟ್ಟಡ ನಿರ್ಮಾಣವಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ಜತೆಗೆ ಎರಡು ಪಟ್ಟು ದಂಡ ಪಾವತಿಸಬೇಕಾಗುತ್ತದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದ ಇತರೆ ಮಹಾನಗರ ಪಾಲಿಕೆಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದ್ದು, ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಬಿಬಿಎಂಪಿ ವ್ಯಾಪ್ತಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ದಂಡ ಕಟ್ಟುವುದು ಎಂದ ಮಾತ್ರಕ್ಕೆ ನಕ್ಷೆ ಮಂಜೂರಾತಿ ನಿಯಮಾವಳಿ ಉಲ್ಲಂ ಸಿ ಕಟ್ಟಡ ಕಟ್ಟಿಕೊಳ್ಳಬಹುದು ಎಂದಲ್ಲ. ದಂಡ ಕಟ್ಟುವುದು ಈಗಾಗಲೇ ನಿರ್ಮಿಸಿರುವ ಕಟ್ಟಡಗಳಿಗೆ ಮಾತ್ರ ಅನ್ವಯ. ನಕ್ಷೆ ಉಲ್ಲಂಘನೆ ಪ್ರಕರಣಗಳಿಗೆ ಮುಂದೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾ.ಪಂಗಳು ಮೇಲ್ದರ್ಜೆಗೆ: ಬೆಂಗಳೂರು ನಗರ ಜಿಲ್ಲೆಯ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಮಾದಾವರ, ಸಿದ್ದನಹೊಸಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ಪುರಸಭೆಗೆಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಸಭೆಒಪ್ಪಿಗೆ ನೀಡಿದೆ ಎಂದು ಸಚಿವ ಜೆ.ಮಾಧು ಸ್ವಾಮಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next