Advertisement
ಸುರತ್ಕಲ್ ಅಕ್ರಮ ಟೋಲ್ ಸುಂಕವನ್ನು ಹೆಜಮಾಡಿ, ತಲಪಾಡಿ, ಬ್ರಹ್ಮರಕೂಟ್ಲುವಿನಲ್ಲಿ ಹಂಚಿಕೆಮಾಡಿ ಸಂಗ್ರಹಿಸುವ ಸಲಹೆಯನ್ನು ಉಡುಪಿಯ ಜನಪ್ರತಿನಿಧಿಗಳು ನೀಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ಸರಿಯಲ್ಲ. ಸುರತ್ಕಲ್ ಟೋಲ್ ಸುಂಕವನ್ನು ಪೂರ್ತಿ ರದ್ದುಗೊಳಿಸ ಬೇಕು ಎಂದು ಆಗ್ರಹಿಸಲಾಯಿತು.
ಅನಧಿಕೃತ ಸುರತ್ಕಲ್ ಟೋಲ್‌ಗೇಟನ್ನು ರದ್ದುಮಾಡಿ ಅದರ ಸಂಪೂರ್ಣ ಶುಲ್ಕವನ್ನು ಹೆಜಮಾಡಿ ಟೋಲ್‌ಗೇಟ್‌ನಲ್ಲಿ ವಸೂಲಿ ಮಾಡುವ ಆದೇಶವನ್ನು ರದ್ದುಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ವತಿಯಿಂದ ಸಚಿವ ಸುನಿಲ್ ಕುಮಾರ್, ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ತಾ.ಪಂ. ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಕಾರ್ಯನಿರತ ಅಧ್ಯಕ್ಷ ಪಿ. ಹರಿದಾಸ್ ಭಟ್, ಪ್ರಧಾನ ಕಾರ್ಯದರ್ಶಿ ರಮೇಶ್ ಕೋಟ್ಯಾನ್ ಕಟಪಾಡಿ, ಖಜಾಂಚಿ ಪ್ರಕಾಶ್ ಅಡಿಗ ಮೊದಲಾದವರು ಇದ್ದರು.