Advertisement

ರಾಷ್ಟ್ರ ರಾಜಧಾನಿಯಲ್ಲಿ ಗುರುವಾರವೂ ಅಗ್ನಿ ಅವಘಡ; 20ಕ್ಕೂ ಹೆಚ್ಚು ಜನರ ರಕ್ಷಣೆ

11:57 AM Jun 09, 2022 | Team Udayavani |

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗುರುವಾರವೂ ಅಗ್ನಿ ಅವಘಡ ಸಂಭವಿಸಿದ್ದು, ದೆಹಲಿಯ ಬಟ್ಲಾ ಹೌಸ್ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆಗ್ನೇಯ ದೆಹಲಿಯ ಬಾಟ್ಲಾ ಹೌಸ್ ಪ್ರದೇಶದಲ್ಲಿ ಐದು ಅಂತಸ್ತಿನ ವಸತಿ ಕಟ್ಟಡದಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.

Advertisement

20ಕ್ಕೂ ಹೆಚ್ಚು ಮಂದಿ ಒಳಗೆ ಸಿಲುಕಿದ್ದು, ಸಕಾಲದಲ್ಲಿಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಕಟ್ಟಡದೊಳಗೆ ಸಿಲುಕಿದ್ದ ವರನ್ನು ರಕ್ಷಿಸಿದ್ದಾರೆ.

ಬುಧವಾರ ಜಾಮಿಯಾ ನಗರ ಪ್ರದೇಶದ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂದಿತ್ತು. 11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿತ್ತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಹಲವಾರು ಇ-ರಿಕ್ಷಾಗಳು ಸುಟ್ಟು ಭಸ್ಮವಾಗಿದ್ದವು.ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ ಒಟ್ಟು 10 ಕಾರುಗಳು, ಒಂದು ಮೋಟಾರ್ ಸೈಕಲ್, ಎರಡು ಸ್ಕೂಟಿ, 30 ಹೊಸ ಇ-ರಿಕ್ಷಾಗಳು ಮತ್ತು 50 ಹಳೆಯ ಇ-ರಿಕ್ಷಾಗಳು ಬೆಂಕಿಗೆ ಆಹುತಿಯಾಗಿದ್ದವು.

ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇ-ರಿಕ್ಷಾದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next