Advertisement

ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 114 ನೇ ವರ್ಷದ ಜನ್ಮದಿನೋತ್ಸವ ಆಚರಣೆ

07:19 PM Apr 01, 2021 | Team Udayavani |

ಬೆಂಗಳೂರು:ಬಡವರು ಬಡವರಾಗೇ ಉಳಿಯದೇ ಸಮಾಜದಲ್ಲಿ ತಲೆ ಎತ್ತಿ ಬದುಕಲು ಸೂಕ್ತವಾಗುವಂತೆ ಅವರ ಬದುಕನ್ನು ರೂಪಿಸುವುದು ಸಮಾಜದ ಎಲ್ಲರ ಕರ್ತವ್ಯವಾಗಿದೆ ಎಂದು ಸಿದ್ಧಗಂಗಾ ಪೀಠಾಧ್ಯಕ್ಷರಾಗಿದ್ದ ಶ್ರೀ ಶಿವಕುಮಾರಸ್ವಾಮೀಜಿಯವರು ಹೇಳುತ್ತಿದ್ದರು. ಅವರು ನೀಡಿದ ಸಂದೇಶವನ್ನು ಅನುಷ್ಠಾನಗೊಳಿಸುವ ಮೂಲಕ ಸ್ವಾಮೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ ಹೇಳಿದರು.

Advertisement

ಗೋವಿಂದರಾಜ ನಗರ ಕ್ಷೇತ್ರದ ಮೂಡಲಪಾಳ್ಯ ವಾರ್ಡಿನ ಜ್ಞಾನಸೌಧದಲ್ಲಿ ವಿ. ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾಗಿದ್ದ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಶಿವಯೋಗಿ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 114 ನೇ ವರ್ಷದ ಜನ್ಮದಿನೋತ್ಸವದ ಗುರುವಂದನಾ ಸಮಾರಂಭವದಲ್ಲಿ ಅವರು ಮಾತನಾಡಿದರು. ಕನಕಪುರದ ಶ್ರೀ ದೇಗುಲಮಠ ಶ್ರೀ ಚನ್ನಬಸವ ಸ್ವಾಮಿಗಳವರು ಸಾನ್ನಿಧ್ಯ ವಹಿಸಿದ್ದರು.

ಇದನ್ನೂ ಓದಿ:ಬೆಳಗಾವಿ ,ಮಸ್ಕಿ , ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ -ಕಟೀಲ್

ಈ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪ್ರತಿಮೆಗೆ  ಮಾಲಾರ್ಪಣೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ  ನಾಡಿನ ಸಾಧಕರಾದ ಐಸಾಕ್ ನಿರ್ದೇಶಕ ಪ್ರೊ.ಆರ್.ಎಸ್.ದೇಶಪಾಂಡೆ,   ಹಿರಿಯ ಪತ್ರಕರ್ತೆ ಡಾ. ಆರ್.ಪೂರ್ಣಿಮಾ, ಸಾಹಿತಿ ಡಾ.ಸಿ.ಶಿವಕುಮಾರಸ್ವಾಮಿ, ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಸೇರಿದಂತೆ 14 ಮಂದಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಭಾಪತಿ ಡಾ. ಬಿಎಲ್ ಶಂಕರ್ ವಿ.ಸೋಮಣ್ಣ ನವರು ಮಾನವೀಯ ಸಂಬಂಧಗಳಿಗೆ ಒತ್ತು ನೀಡುವ ಸಜ್ಜನ ರಾಜಕಾರಣಿ ಎಂದು ಬಣ್ಣಿಸಿದರು. ಚಲನಚಿತ್ರ  ನಟ ಶ್ರೀನಿವಾಸಮೂರ್ತಿ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಸೋಮಣ್ಣ, ಕಾರ್ಯಾಧ್ಯಕ್ಷರಾದ ಡಾ.‌ ಅರುಣ್ ಸೋಮಣ್ಣ, ಕೋಶಾಧ್ಯಕ್ಷರಾದ ಡಾ‌. ಬಿ.ಎಸ್ ನವೀನ್, ಪ್ರಧಾನ ಕಾರ್ಯದರ್ಶಿಗಳಾದ  ಫಾಲನೇತ್ರ, ಕಾರ್ಯದರ್ಶಿಗಳಾದ ಬಿ.ಎಸ್ ದಿವ್ಯ ಅವಿನಾಶ್ ಹಾಗೂ ಹಲವು ಗಣ್ಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next