Advertisement

ಅನಕ್ಷರತೆ, ಅನಾರೋಗ್ಯ ಬಡತನ ನಿರ್ಮೂಲನೆ ದೂರದೃಷ್ಟಿ ಹೊಂದಿದ್ದರು ಡಾ|ಟಿ.ಎಂ.ಎ. ಪೈ

11:10 PM May 01, 2022 | Team Udayavani |

ಬೆಂಗಳೂರು: ಡಾ| ಟಿ.ಎಂ.ಎ. ಪೈ ಅವರು, ಸ್ವಪ್ರಯತ್ನದಿಂದಲೇ ಉನ್ನತ ಸ್ಥಾನಕ್ಕೇರಿದ ವ್ಯಕ್ತಿಯಾಗಿದ್ದು, ಸಮಾಜದ ಮೂರು ಪ್ರಮುಖ ಸಮಸ್ಯೆಗಳಾದ ಅನಕ್ಷರತೆ, ಅನಾರೋಗ್ಯ ಮತ್ತು ಬಡತನವನ್ನು ನಿವಾರಿಸುವ ಕನಸು ಹೊಂದಿದ್ದವರು ಅವರು ಎಂದು ಎಂಇಎಂಜಿ ಅಧ್ಯಕ್ಷ ಡಾ| ರಂಜನ್‌ ಆರ್‌. ಪೈ ಅವರು ತಿಳಿಸಿದರು.

Advertisement

ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ ಸಂಸ್ಥೆಯ ಸ್ಥಾಪಕರಾದ ಡಾ| ಟಿ.ಎಂ.ಎ. ಪೈ ಅವರ 124ನೇ ಜನ್ಮದಿನದ ಅಂಗವಾಗಿ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಪೈ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಂಸ್ಥಾಪಕರಂತೆ ಯಾವುದೇ ಪ್ರತಿಫ‌ಲವನ್ನು ನಿರೀಕ್ಷಿಸದೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಯನ್ನು ನೀಡುತ್ತಿದ್ದು, ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗು ತ್ತೇವೆ ಎಂದು ಹೇಳಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಗದು ಬಹುಮಾನವನ್ನು ವಿತರಿಸಲಾಯಿತು. ನಿಟ್ಟೆ ಡೀಮ್ಡ್ ವಿವಿಯ ಕುಲಾಧಿಪತಿ ಎನ್‌. ವಿನಯ್‌ ಹೆಗ್ಡೆ, ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್‌. ಪೈ, ಮಾಹೆಯ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಡಾ| ಟಿ.ಎಂ.ಎ. ಪೈ ಫೌಂಡೇಶನ್‌ನ ಕಾರ್ಯದರ್ಶಿ ಟಿ. ಅಶೋಕ್‌ ಪೈ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next