Advertisement

ಡಾ|ಅಂಬೇಡ್ಕರ್‌ ಚಿಂತನೆ ಪಾಲಿಸಿ: ಪ್ರೊ|ಹರೀಶ

04:35 PM Dec 09, 2021 | Team Udayavani |

ರಾಯಚೂರು: ಅಂಬೇಡ್ಕರ್‌ ಅವರನ್ನು ಸಂವಿಧಾನ ಶಿಲ್ಪಿ, ನಿಯಮಗಳ ಅನುಷ್ಠಾನಕಾರ, ಸಮಾನತೆಯ ಹರಿಕಾರ ಹೀಗೆ ಅನೇಕ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದಲಾವಣೆ ಹೊಂದುವ ಅನಿವಾರ್ಯತೆ ಇದೆ ಎಂದು ರಾಯಚೂರು ವಿವಿ ಕುಲಪತಿ ಪ್ರೊ| ಹರೀಶ ರಾಮಸ್ವಾಮಿ ಅಭಿಪ್ರಾಯ ಪಟ್ಟರು.

Advertisement

ರಾಯಚೂರು ವಿಶ್ವವಿದ್ಯಾಲಯದಲ್ಲಿ ಡಾ| ಬಿ.ಅರ್‌.ಅಂಬೇಡ್ಕರ್‌ರ 65ನೇ ಪರಿನಿರ್ವಾಣ ನಿಮಿತ್ತ ಭಾವಚಿತ್ರಕ್ಕೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿ, ಅಂಬೇಡ್ಕರ್‌ ಬೋಧನೆಗಳು, ಸಂದೇಶಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಅಭ್ಯಸಿಸುವುದು, ಅವಲೋಕಿಸುವುದು, ವಿಮರ್ಶಿಸುವುದು ಅಗತ್ಯವಾಗಿದೆ. ಅವರ ವಿಚಾರ, ಸಮಾಜ ಸುಧಾರಣೆ, ಸಾಮಾಜಿಕ ಸಿದ್ಧಾಂತಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದರು.

ರಾಯಚೂರು ವಿವಿ ಕುಲಸಚಿವ ಪ್ರೊ| ವಿಶ್ವನಾಥ ಎಂ. ಮಾತನಾಡಿ, ಭಾರತರತ್ನ ಡಾ| ಭೀಮರಾವ್‌ ಅಂಬೇಡ್ಕರ್‌ ದೇಶದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿದ ದಿಟ್ಟ ವ್ಯಕ್ತಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮೇರು ವ್ಯಕ್ತಿ ಎಂದು ಬಣ್ಣಿಸಿದರು.

ರಾಯಚೂರು ವಿವಿ ವಿತ್ತಾಧಿಕಾರಿ ಪ್ರೊ| ಪಾರ್ವತಿ ಸಿ.ಎಸ್‌., ಉಪಕರಣಾತ್ಮಕ ತಂತ್ರಜ್ಞಾನ ವಿಭಾಗ ಪ್ರಾಧ್ಯಾಪಕ ಪ್ರೊ| ಪಿ.ಭಾಸ್ಕರ್‌, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಪ್ರೊ| ನುಸ್ರತ್‌ ಫಾತೀಮಾ, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ವಾಸುದೇವ ಜೇವರ್ಗಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next