Advertisement

5 ವರ್ಷದಲ್ಲಿ ಅಭಿವೃದ್ಧಿ ಕಾರ್ಯ ಮಾಡದಿದ್ದರೆ ಹೆಸರು ಬದಲು: ಸಚಿವ ಅಶ್ವತ್ಥ ನಾರಾಯಣ

08:48 PM Feb 14, 2023 | Team Udayavani |

ಮಂಡ್ಯ: 50 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕಾರ್ಯಗಳನ್ನು ಕೇವಲ ಐದೇ ವರ್ಷಗಳಲ್ಲಿ ಮಾಡದಿದ್ದರೆ ನನ್ನ ಹೆಸರನ್ನೇ ಬದಲಾಯಿಸಿಕೊಳ್ಳುತ್ತೇನೆ ಎಂದು ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸವಾಲು ಹಾಕಿದರು.

Advertisement

ತಾಲೂಕಿನ ಸಾತನೂರಿನ ಕಂಬದ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಬಿಜೆಪಿ ವತಿಯಿಂದ ಕಸಬಾ ಮಹಾಶಕ್ತಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಮೈಸೂರು ಮಹಾರಾಜರ ಕಾಲದಲ್ಲಿ ಉತ್ತಮ ಆಡಳಿತ ನೀಡಿ, ಅಭಿವೃದ್ಧಿ ಕೆಲಸ ಮಾಡಿದ್ದರು. ಅವರ ಕೊಡುಗೆಗಳು ವಿಶ್ವವೇ ಎದುರು ನೋಡುವ ಆಡಳಿತ ಕೊಟ್ಟಿದ್ದರು. ಅಂತಹ ಸಾಧನೆಯನ್ನು ಯಾರೂ ಮಾಡಲಿಲ್ಲ ಎಂದು ಪರೋಕ್ಷವಾಗಿ ಜೆಡಿಎಸ್‌ ವಿರುದ್ಧ ಹರಿಹಾಯ್ದರು.

ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು:
ಕಂದಾಯ ಸಚಿವ ಆರ್‌.ಅಶೋಕ್‌, ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ವಿಮುಕ್ತಿಗೊಳಿಸಿದ ಬಳಿಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ವಹಿಸಿಕೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅವರು ಸಹ ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

ಮಂಗಳವಾರ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಬಗ್ಗೆ ಪ್ರೀತಿ ಹಾಗೂ ಬಾಂಧವ್ಯ ಎರಡೂ ಇದೆ. ಉಸ್ತುವಾರಿ ನಿಭಾಯಿಸಲು ಬೊಮ್ಮಾಯಿ ಸಂಪುಟದಲ್ಲಿ ಹಲವು ಸಮರ್ಥ ಸಚಿವರಿದ್ದು, ಜಿಲ್ಲೆಯ ಬಗ್ಗೆ ಅಭಿಮಾನವೇ ಬೇರೆ, ಜವಾಬ್ದಾರಿಯಾಗಿ ಆಡಳಿತ ನಿರ್ವಹಿಸುವುದೇ ಬೇರೆ ಎನ್ನುವ ಮೂಲಕ ಪರೋಕ್ಷವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

ಹೆಚ್ಚಿನ ಮಾಹಿತಿ ಇಲ್ಲ:
ತಾಲೂಕಿನ ಸಾತನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಉಸ್ತುವಾರಿ ನಿಶ್ಚಯ ಮಾಡುವುದು ಮುಖ್ಯಮಂತ್ರಿಗಳು. ಈ ವಿಚಾರದಲ್ಲಿ ಹೆಚ್ಚಿನ ಮಾಹಿತಿ ಇಲ್ಲ. ಮಂಡ್ಯ ಜಿಲ್ಲೆ ವಿಚಾರದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿಯನ್ನಷ್ಟೇ ನಾನು ವಹಿಸಿಕೊಂಡಿದ್ದು, ಉಸ್ತುವಾರಿ ಕೇಳುವುದು ಅಥವಾ ಬೇಡ ಎನ್ನುವುದು ನನಗೆ ಸಂಬಂಧಿಸಿದ್ದಲ್ಲ. ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next