Advertisement
ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಬಸವಣ್ಣ ಅವರ ತತ್ತ್ವ-ಚಿಂತನೆಗಳಿಂದ ಪ್ರೇರಣೆ ಪಡೆದುಕೊಂಡಿರುವ ಕರ್ನಾಟಕವು ಇನ್ನು 25 ವರ್ಷಗಳಲ್ಲಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಜಾಗತಿಕವಾಗಿ ನಾಯಕ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Related Articles
Advertisement
ಕಾಯಕ, ಜ್ಞಾನ ಮತ್ತು ದಾಸೋಹಗಳಿಗೆ ಪ್ರಾಶಸತ್ಯ ಕೊಡುವ ಮೂಲಕ ಬಸವಣ್ಣನವರು 12ನೇ ಶತಮಾನದಲ್ಲೇ ಉದ್ಯೋಗ, ಶಿಕ್ಷಣ ಮತ್ತು ಆಹಾರ ಭದ್ರತೆಗಳ ಬಗ್ಗೆ ಗಾಢವಾಗಿ ಚಿಂತಿಸಿದ್ದರು. ಜತೆಗೆ ಸಮಾಜವನ್ನು ಅನಪೇಕ್ಷಿತ ನಿರ್ಬಂಧಗಳಿಂದ ಮುಕ್ತಗೊಳಿಸಲು ಅವರು ಪ್ರಾಮಾಣಿಕವಾಗಿ ಶ್ರಮಿಸಿದವರಾಗಿದ್ದಾರೆ ಎಂದರು.
ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯ ಅಭಿಜಿತ್ ಸಾಲೀಮಠ ಮತ್ತು `ಯುಕೆ ಕನ್ನಡಿಗರು’ ಸಂಘಟನೆಯ ಅಧ್ಯಕ್ಷ ಗಣಪತಿ ಭಟ್ ಮುಂತಾದವರಿದ್ದರು.