Advertisement

ಡಾ|ಬಿ.ಎಂ. ಹೆಗ್ಡೆ ಅವರಿಗೆ ಇಂದು ಪದ್ಮವಿಭೂಷಣ ಪ್ರದಾನ

12:41 AM Nov 09, 2021 | Team Udayavani |

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬೆಳ್ಳೆ ಮೋನಪ್ಪ ಹೆಗ್ಡೆ (ಡಾ| ಬಿ. ಎಂ. ಹೆಗ್ಡೆ) ಅವರಿಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ.

Advertisement

ಡಾ| ಬಿ.ಎಂ.ಹೆಗ್ಡೆಯವರಿಗೆ ಈ ವರ್ಷದ ಜನವರಿಯಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಅವರು ಹೊಸದಿಲ್ಲಿಗೆ ತೆರಳಿದ್ದು ನಾಳೆ ರಾಷ್ಟ್ರಪತಿ ರಾಮಾನಾಥ ಕೋವಿಂದ್‌ ಅವರಿಂದ ಪ್ರಶಸ್ತಿ ಸ್ವೀಕರಿಸುವರು. ಅವರಿಗೆ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು.

ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದ ಡಾ| ಬಿ. ಎಂ. ಹೆಗ್ಡೆಯವರು ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದ ಕೆಲವೇ ಭಾರತೀಯ ವೈದ್ಯರಲ್ಲಿ ಅಗ್ರಗಣ್ಯರು ಎಂಬ ಹೆಗ್ಗಳಿಕೆಗೆ ಪಾತ್ರರಾದವರು.

ಇದನ್ನೂ ಓದಿ:12ರ ವರೆಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಸುಲಭ ಆರೋಗ್ಯ ಚಿಕಿತ್ಸೆ ಮತ್ತು ಅನಾವಶ್ಯಕ ಚಿಕಿತ್ಸೆಗಳ ಬಗ್ಗೆ ಮಾಹಿತಿಯನ್ನು ಒಳಗೊಂಡ ಉಪನ್ಯಾಸಗಳ ಮೂಲಕ ಜನಸಾಮಾನ್ಯರಲ್ಲೂ ಜನಪ್ರಿಯತೆಯನ್ನು ಗಳಿಸಿದ ವೈದ್ಯಶ್ರೇಷ್ಠ. ಡಾ| ಹೆಗ್ಡೆಯವರು ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ ಶಿಕ್ಷಣ ತಜ್ಞರಾಗಿ, ಆರೋಗ್ಯ ಸಲಹೆಗಾರರಾಗಿ, ವಾಗ್ಮಿಯಾಗಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next